- ಕೊಡಗಿನಲ್ಲಿ ಶಾಲೆ-ಕಾಲೇಜುಗಳಿಗೆ ರಜೆ, ವಿಜಯಪುರದಲ್ಲಿ ಭಾರೀ ಮಳೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಹವಾಮಾನ ಇಲಾಖೆ ಇಂದು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಕೊಡಗು, ಉಡುಪಿ, ದಕ್ಷಿಣ ಕನ್ನಡ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ತೀವ್ರ ಮಳೆಯ ಎಚ್ಚರಿಕೆ ನೀಡಲಾಗಿದೆ.
ಯೆಲ್ಲೋ ಅಲರ್ಟ್
ಉಳಿದ ಜಿಲ್ಲೆಗಳೆಲ್ಲಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯಬಾರದು ಎಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಕೊಡಗಿನಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
ಕೊಡಗು ಜಿಲ್ಲೆಯಾದ್ಯಂತ ತೀವ್ರ ಮಳೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ನಿರಂತರ ಮಳೆ ಸುರಿಯುತ್ತಿರುವ ಕಾರಣದಿಂದಾಗಿ ಜಿಲ್ಲಾಧಿಕಾರಿ ವೆಂಕಟರಾಜ್ ಅವರು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಿದ್ದಾರೆ.ಇದನ್ನು ಓದಿ –ಭಾರತದ ಆಮದುಗಳ ಮೇಲೆ 24 ಗಂಟೆಗಳಲ್ಲಿ ಭಾರೀ ಸುಂಕ ಹೆಚ್ಚಳ: ಟ್ರಂಪ್
ವಿಜಯಪುರದಲ್ಲಿ ಭಾರೀ ಮಳೆ
ಇತ್ತ ವಿಜಯಪುರ ಜಿಲ್ಲೆಯಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ರಾತ್ರಿಯಿಂದಲೇ ಬಿಟ್ಟು ಬಿಡದೆ ಮಳೆ ಇಳಿಯುತ್ತಿದೆ. ಗುಡುಗು-ಸಿಡಿಲಿನೊಂದಿಗೆ ಬಿದ್ದ ಮಳೆಯು ಜನಜೀವನ ಅಸ್ತವ್ಯಸ್ತ ಮಾಡಿದೆ. ನಗರದಲ್ಲಿ ಹಲವು ರಸ್ತೆಗಳು ಮಳೆ ನೀರಿನಿಂದ ಮುಚ್ಚಿ ಹೋಗಿವೆ. ರಸ್ತೆಗಳಲ್ಲಿ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಸಾಗಾಟಕ್ಕೆ ಪರದಾಡುವ ಸ್ಥಿತಿಗೆ ಬಂದಿದ್ದಾರೆ.