ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆ (Old Pension Scheme – OPS) ಜಾರಿಗೊಳಿಸುವ ವಿಷಯದಲ್ಲಿ ನಿರ್ಧಾಯಕ ಬೆಳವಣಿಗೆ ಕಂಡುಬಂದಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಈಗಾಗಲೇ ಜಾರಿಗೊಳಿಸುವುದಾಗಿ ಘೋಷಿಸಿದ್ದು, ಆಗಸ್ಟ್ 12ರಂದು ಮಹತ್ವದ ಚರ್ಚಾಸಭೆ ನಡೆಯಲಿದೆ.
ವಿಧಾನಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ 306ರಲ್ಲಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆ ಬದಲಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದ ಸಾಧ್ಯತೆಗಳನ್ನು ಚರ್ಚಿಸಲಾಗುವುದು.
ಈ ಸಭೆಯ ಹಿನ್ನೆಲೆಯಾಗಿ, ಸರ್ಕಾರದ ಕಾರ್ಯದರ್ಶಿ ರಮಣ್ ದೀಪ್ ಚೌಧರಿ (ಭಾ.ಆ.ಸೇ) ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದ ವರದಿ ಸಲ್ಲಿಸಿದ್ದಾರೆ. ಹಾಗೆಯೇ, ಸರ್ಕಾರದ ಕಾರ್ಯದರ್ಶಿ ತುಳಸಿ ಮದ್ದಿನೇನಿ (ಭಾ.ಆ.ಸೇ) ಆಂಧ್ರ ಪ್ರದೇಶಕ್ಕೆ ಭೇಟಿ ನೀಡಿ ವರದಿ ನೀಡಿದ್ದಾರೆ.ಇದನ್ನು ಓದಿ –ಇಂದು ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ
ಈ ವರದಿಗಳ ಆಧಾರದ ಮೇಲೆ ಸಭೆ ಏರ್ಪಡಿಸಲಾಗಿದ್ದು, ಸಂಬಂಧಿತ ಅಧಿಕಾರಿಗಳನ್ನು ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ.