By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ರಾಜ್ಯದ ಕೆರೆಗಳಲ್ಲಿ ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆಗೆ ನಿಷೇಧ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > ರಾಜ್ಯದ ಕೆರೆಗಳಲ್ಲಿ ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆಗೆ ನಿಷೇಧ
KarnatakaLatest News

ರಾಜ್ಯದ ಕೆರೆಗಳಲ್ಲಿ ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆಗೆ ನಿಷೇಧ

Team Varthaman
Last updated: August 12, 2025 6:42 AM
Team Varthaman
Published: August 12, 2025
Share
SHARE
  • – ಪರಿಸರ ಸ್ನೇಹಿ ಹಬ್ಬಕ್ಕೆ ಸಾರ್ವಜನಿಕರಲ್ಲಿ ಮನವಿ

ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದ ಸಂದರ್ಭದಲ್ಲಿ, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮತ್ತು ಬಣ್ಣ ಲೇಪಿತ ಗಣೇಶ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಚೇರಿಯ ಪರಿಸರ ಅಧಿಕಾರಿಗಳು ಪ್ರಕಟಿಸಿದ್ದಾರೆ.

Join WhatsApp Group

ಪ್ರತಿ ವರ್ಷ ಹಬ್ಬದ ಬಳಿಕ ಮೂರ್ತಿಗಳನ್ನು ಕೆರೆ, ಬಾವಿ ಹಾಗೂ ಇತರ ನೈಸರ್ಗಿಕ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ಜಲಮೂಲಗಳು ಕಲುಷಿತಗೊಳ್ಳುತ್ತವೆ. ಇದರ ಪರಿಣಾಮವಾಗಿ ಜಲದ ಭೌತಿಕ ಹಾಗೂ ರಾಸಾಯನಿಕ ಗುಣಗಳು ಹಾನಿಗೊಳಗಾಗಿ, ಪ್ರಾಣಿ, ಪಕ್ಷಿ ಮತ್ತು ಜಲಚರ ಜೀವಿಗಳ ಬದುಕಿಗೆ ಅಪಾಯ ಉಂಟಾಗುತ್ತದೆ. ಸಾರ್ವಜನಿಕ ಆರೋಗ್ಯಕ್ಕೂ ಹಾನಿ ಸಂಭವಿಸುತ್ತದೆ.

ಈ ಹಿನ್ನೆಲೆಯಲ್ಲಿ, 2016ರ ಜುಲೈ 20ರಂದು ಹೊರಡಿಸಿದ ಅಧಿಸೂಚನೆಯ ಪ್ರಕಾರ, ರಾಜ್ಯದ ಯಾವುದೇ ಜಲಮೂಲಗಳಲ್ಲಿ ಪಿಒಪಿ ಹಾಗೂ ಬಣ್ಣ ಲೇಪಿತ ಮೂರ್ತಿಗಳ ವಿಸರ್ಜನೆ ಸಂಪೂರ್ಣ ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸಿದರೆ, 1974ರ ಜಲಮಾಲಿನ್ಯ ನಿಯಂತ್ರಣ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ 1860ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕರಿಗೆ ಸೂಚನೆಗಳು:

  • ಬಣ್ಣರಹಿತ ಮಣ್ಣಿನ ಅಥವಾ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಮಾತ್ರ ಬಳಸಬೇಕು.
  • ವಿಸರ್ಜನೆಗಾಗಿ ನಗರಸಭೆ ಅಥವಾ ಪುರಸಭೆ ನಿಗದಿಪಡಿಸಿದ ಸ್ಥಳಗಳು ಅಥವಾ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನಗಳನ್ನು ಬಳಸಬೇಕು.
  • ಹೂವು, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಮುಂತಾದ ಹಸಿ ಕಸವನ್ನು ಪ್ರತ್ಯೇಕಿಸಿ ನೀಡಬೇಕು.
  • ತೈಲ ಬಣ್ಣಗಳನ್ನು ತೊರೆದು, ನೈಸರ್ಗಿಕ ಬಣ್ಣಗಳಿಂದ ಅಲಂಕರಿಸಿದ ಮೂರ್ತಿಗಳನ್ನು ಪೂಜಿಸಬೇಕು.
  • ಸಾರ್ವಜನಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕ, ಶಬ್ದ ಉತ್ಪಾದಕ ಉಪಕರಣ ಬಳಕೆಗಾಗಿ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು.
  • ಪೆಂಡಲ್ ಅಲಂಕಾರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನು ಮಾತ್ರ ಬಳಸಿ, ನಿಷೇಧಿತ ಪ್ಲಾಸ್ಟಿಕ್ ವಸ್ತುಗಳಿಂದ ದೂರವಿರಬೇಕು.

ಪರಿಸರ ಸ್ನೇಹಿ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸಲು ಎಲ್ಲರೂ ಸಹಕರಿಸಬೇಕು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಮನವಿ ಮಾಡಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ಹಿರಿಯ ನಟ ಗಡ್ಡಪ್ಪಗೆ ಅಂತಿಮ ನಮನ
ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ಮೀಸಲಾತಿ ಹೆಚ್ಚಿಸಬೇಕು: ಸಿಎಂ
ಶೃಂಗೇರಿ: ಅಪ್ರಕಟಿತ ಕೃತಿಗಳನ್ನು ಪುಸ್ತಕ ರೂಪದಲ್ಲಿ ಹೊರ ತರಲುಒಡಂಬಡಿಕೆ
ಅಮೆರಿಕದಲ್ಲಿ ಟ್ರಂಪ್‌ನ ಹೊಸ ಸುಂಕ ನೀತಿ ಘೋಷಣೆ
ನಿವೃತ್ತ ಸರ್ಕಾರಿ ನೌಕರರ ಪಿಂಚಣಿ ಪ್ರಸ್ತಾವನೆಗೆ ಅವಧಿಯೊಳಗಿನ ಸಲ್ಲಿಕೆ ಕಡ್ಡಾಯ: ಸರ್ಕಾರದ ಜ್ಞಾಪನೆ
TAGGED:breakingnewsGanesha ChaturtiKarnataka Govtlatestnewsಪಿಒಪಿ ಗಣೇಶ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BengaluruKarnatakaTrending

ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಒತ್ತಡ ಕಾರಣವೆಂದು ಆರೋಪ

Team Varthaman
Team Varthaman
June 6, 2025
ಮಂತ್ರಾಲಯ ಬಸ್ ಅಪಘಾತ: ಓರ್ವ ಸಾವು, 11 ಮಂದಿಗೆ ಗಾಯ
CETನಲ್ಲಿ ಕಡಿಮೆ ಅಂಕ: ಮಗಳು ಹಾಗೂ ತಾಯಿ ಆತ್ಮಹತ್ಯೆಗೆ ಶರಣು
ಮೈಸೂರಿನಲ್ಲಿ ಮತ್ತೆ ಹುಲಿ ದಾಳಿ – 15 ದಿನಗಳಲ್ಲಿ ಮೂರನೇ ಸಾವು
ಮೈಸೂರು ಜಿಲ್ಲೆಯಲ್ಲಿ 20 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್‌’ ಪರೀಕ್ಷೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?