ಮಂಡ್ಯ: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ನಡುವೆ, ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಕರೋಟಿ ಗ್ರಾಮದ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ನವೀನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ನವೀನ್ ಬೆಂಗಳೂರಿನ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ಓದುತ್ತಿದ್ದು, ರಜೆ ಸಂದರ್ಭದಲ್ಲಿ ಊರಿಗೆ ಬಂದಿದ್ದರು. ಮನೆಯಲ್ಲಿ ಇದ್ದಾಗ ಎದೆನೋವಿನಿಂದ ಅಕಸ್ಮಿಕವಾಗಿ ಕುಸಿದುಬಿದ್ದ ಅವರು, ತಕ್ಷಣವೇ ಪೋಷಕರು ಕಿಕ್ಕೇರಿ ಆಸ್ಪತ್ರೆಗೆ ಕರೆದೊಯ್ದರು.
ಇದನ್ನು ಓದಿ –ರಾಜ್ಯಾದ್ಯಂತ ಭಾರೀ ಮಳೆ: ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಅಲ್ಲಿ ವೈದ್ಯರು ಚನ್ನರಾಯಪಟ್ಟಣಕ್ಕೆ ಕರೆದೊಯ್ಯಲು ಸಲಹೆ ನೀಡಿದರು. ಆದರೆ, ಚನ್ನರಾಯಪಟ್ಟಣಕ್ಕೆ ಸಾಗಿಸುತ್ತಿದ್ದ ವೇಳೆ ಮಾರ್ಗಮಧ್ಯದಲ್ಲೇ ನವೀನ್ ಸಾವನ್ನಪ್ಪಿದರು.