ಮಂಡ್ಯ : ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಮದ್ದೂರಿನಲ್ಲಿ ಇಂದು ಹಿಂದೂಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ.
ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಹಾಗೂ ಹಿಂದೂ ರಕ್ಷಣಾ ಸಮಿತಿಗಳು ಈ ಬಂದ್‌ಗೆ ಮುಂದಾಳತ್ವ ವಹಿಸಿದ್ದು, ಮದ್ದೂರು ಪಟ್ಟಣದ ವ್ಯಾಪಾರಸ್ಥರು ಅಂಗಡಿ–ಮಂಗಟ್ಟುಗಳನ್ನು ಮುಚ್ಚಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಅಗತ್ಯವಿದ್ದರೆ ಗಡಿಪಾರು ಮಾಡಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.ಇದನ್ನು ಓದಿ –ಟ್ರಾಫಿಕ್ ದಂಡ ಬಾಕಿದವರಿಗೆ ರಾಜ್ಯ ಸರ್ಕಾರದಿಂದ ಶೇಕಡಾ 50 ರಿಯಾಯಿತಿ
ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳ ಬೃಹತ್ ಮೆರವಣಿಗೆ ಕೂಡ ಶೀಘ್ರದಲ್ಲೇ ಪ್ರಾರಂಭವಾಗಲಿದೆ.