ಬೆಂಗಳೂರು : ಪ್ರಸ್ತುತ ರಾಜ್ಯ ವಿಧಾನ ಪರಿಷತ್ತಿನಲ್ಲಿ ಖಾಲಿಯಿರುವ ಸ್ಥಾನಗಳಿಗೆ ನಾಲ್ವರನ್ನು ರಾಜ್ಯ ಸರಕಾರ ನಾಮ ನಿರ್ದೇಶನ ಮಾಡಿರುವುದಾಗಿ ವರದಿಯಾಗಿದೆ.
ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಹಿರಿಯ ಪತ್ರಕರ್ತ ಕೆ.ಶಿವಕುಮಾರ್, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿದ್ದ ರಮೇಶ್ ಬಾಬು ಹಾಗೂ ದಲಿತ ಮುಖಂಡ ಎಫ್.ಎಚ್.ಜಕ್ಕಪ್ಪನವರ್ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪರಿಷತ್ ಸದಸ್ಯರಾಗಿದ್ದ ಕಾಂಗ್ರೆಸ್‌ನ ಯು.ಬಿ.ವೆಂಕಟೇಶ್, ಪ್ರಕಾಶ್ ಕೆ. ರಾಥೋಡ್ ಅವರ ಅವಧಿ ಅಕ್ಟೋಬರ್ 2024ಕ್ಕೆ ಜೆಡಿಎಸ್‌ನ ಕೆ.ಎ.ತಿಪ್ಪೇಸ್ವಾಮಿ ಅವರ ಅವಧಿ ಜನವರಿ 2025ಕ್ಕೆ ಮುಕ್ತಾಯವಾಗಿತ್ತು. ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸಲು ಸಿ.ಪಿ. ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ಅವರ ಸ್ಥಾನವೂ ತೆರವಾಗಿತ್ತು. ಹೀಗಾಗಿ ಖಾಲಿ ಇದ್ದ ಸ್ಥಾನಗಳಿಗೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ.