ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಉಡುಪಿ, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ, ಇಂದಿನಿಂದ ಮಳೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಮತ್ತು ಆರೆಂಜ್ ಅಲರ್ಟ್ ಪ್ರಕಟಿಸಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಉತ್ತರ ಕನ್ನಡಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದೇ ವೇಳೆ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿಯೂ ಮಳೆಯಾಗುವ ಮುನ್ಸೂಚನೆ ಇದೆ.ಇದನ್ನು ಓದಿ –ಚಾರ್ಮಡಿ ಘಾಟ್‌ನಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಹೊಸ ನಿಯಮ
ಕದ್ರಾ, ಸಿದ್ದಾಪುರ, ಗೇರುಸೊಪ್ಪ, ಕಾರ್ಕಳ, ಶಿರಾಲಿ, ಭಾಲ್ಕಿ, ಬಂಟವಾಳ, ಉಪ್ಪಿನಂಗಡಿ, ಮಂಗಳೂರು, ಕಾರವಾರ, ಜೋಯ್ಡಾ, ಬೀದರ್, ಅಂಕೋಲಾದಂತಹ ಪ್ರದೇಶಗಳಲ್ಲಿ ಈಗಾಗಲೇ ಭಾರಿ ಮಳೆಯಾಗಿದೆ.