- ನಾಲ್ಕು ದಿನಗಳ ಸಂಭ್ರಮ
ಮಂಡ್ಯ: ಶ್ರೀರಂಗಪಟ್ಟಣದ ದಸರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದ್ದು,ಸೆಪ್ಟೆಂಬರ್ 25ರಿಂದ 28ರವರೆಗೆ ನಾಲ್ಕು ದಿನಗಳ ಕಾಲ ದಸರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಘೋಷಿಸಿದರು.
ಈ ಹಿನ್ನೆಲೆಯಲ್ಲಿ ಇಂದು ಮಂಡ್ಯದ ಜಿ.ಪಂ. ಕಾವೇರಿ ಸಭಾಂಗಣದಲ್ಲಿ ಸಚಿವ ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ದಸರಾ ಕಾರ್ಯಕ್ರಮದ ವಿವಿಧ ಆಯಾಮಗಳ ಬಗ್ಗೆ ಚರ್ಚೆ ನಡೆಯಿತು.
ಮಾತನಾಡಿದ ಸಚಿವರು, “ಈ ಬಾರಿಯ ಶ್ರೀರಂಗಪಟ್ಟಣ ದಸರಾ ವಿಶೇಷವಾಗಿ ನಡೆಯಲಿದೆ. ಉದ್ಘಾಟಕರ ಆಯ್ಕೆ ಬಗ್ಗೆ ಎಲ್ಲರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಆನೆಗಳ ಜವಾಬ್ದಾರಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡಲಾಗಿದೆ. ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುತ್ತದೆ ಮತ್ತು ಸ್ಥಳೀಯರ ಹಿತ ಕಾಪಾಡಲಾಗುತ್ತದೆ” ಎಂದು ತಿಳಿಸಿದರು.
ಮಹೋತ್ಸವದ ಸಂದರ್ಭದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಎಲ್ಲಾ ಇಲಾಖೆಗಳಿಗೂ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.ಇದನ್ನು ಓದಿ –ಈ ವರ್ಷದ ದಸರಾ ಆಚರಣೆ ಕಳವಳಕಾರಿ – ಪ್ರಮೋದಾದೇವಿ ಒಡೆಯರ್
ಸಭೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಸಿಇಓ ನಂದಿನಿ, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ನಗರಸಭೆ ಅಧ್ಯಕ್ಷ ನಾಗೇಶ್ ಹಾಗೂ ಹಲವು ಅಧಿಕಾರಿಗಳು ಹಾಜರಿದ್ದರು.