- ನಾಳೆ ಅಧಿಕೃತ ಘೋಷಣೆ ಸಾಧ್ಯತೆ
ಬೆಂಗಳೂರು: ಕನ್ನಡದ ಅಪ್ರತಿಮ ನಟ ಡಾ. ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವ ಸಾಧ್ಯತೆ ಇದ್ದು, ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.
ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಡಾ. ವಿಷ್ಣುವರ್ಧನ್ ಅವರಿಗೆ ರಾಜ್ಯದ ಅತಿ ಶ್ರೇಷ್ಠ ಗೌರವ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದ್ದರು.
ಇದನ್ನು ಓದಿ –ಅಮೆರಿಕ ಒತ್ತಡದ ನಡುವೆಯೂ ಭಾರತ–ರಷ್ಯಾ S-400 ಕ್ಷಿಪಣಿ ಒಪ್ಪಂದ ಚರ್ಚೆ
ಮುಖ್ಯಮಂತ್ರಿಗಳು ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಪ್ರಶಸ್ತಿ ಘೋಷಣೆಗೆ ಭರವಸೆ ನೀಡಿದ್ದು , ನಾಳೆ ನಡೆಯಲಿರುವ ಕ್ಯಾಬಿನೆಟ್ ಸಭೆಯ ನಂತರ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಯಿದೆ.