ಬೆಂಗಳೂರು, ಸೆಪ್ಟೆಂಬರ್ 4: ಕಾಂಗ್ರೆಸ್ ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ಗೃಹಿಣಿಯರಿಗೆ ತಿಂಗಳಿಗೆ ₹2000 ನೀಡಲಾಗುತ್ತಿದೆ. ಆದರೆ ಕಳೆದ ಎಂಟು ತಿಂಗಳಿನಿಂದ ಹಣ ಸರಿಯಾಗಿ ಬ್ಯಾಂಕ್ ಖಾತೆಗೆ ಜಮಾ ಆಗದ ಹಿನ್ನೆಲೆಯಲ್ಲಿ ಮಹಿಳೆಯರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮೂರು-ನಾಲ್ಕು ಕಂತಿನ ಹಣ ಬಾಕಿ ಉಳಿದಿರುವುದರಿಂದ ಮಹಿಳೆಯರು ಗರಂ ಆಗಿದ್ದು, “ಸರ್ಕಾರ ಹಣ ಕೊಡದಿದ್ದರೆ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೂಡ “ರಾಜ್ಯದ ಖಜಾನೆ ಖಾಲಿ ಆಗಿದೆ” ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಿಸಿದ್ದಾರೆ.
ಇದನ್ನು ಓದಿ –ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವರದಿ
ಈ ನಡುವೆಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯಿಸಿ, “ಗೃಹಲಕ್ಷ್ಮಿ ಯೋಜನೆಯ ಹಣವನ್ನು ಶೀಘ್ರದಲ್ಲೇ ಮಹಿಳೆಯರ ಖಾತೆಗಳಿಗೆ ಜಮಾ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬೇಗನೆ ಹಣ ಬಿಡುಗಡೆಯಾಗಲಿದೆ” ಎಂದು ಭರವಸೆ ನೀಡಿದ್ದಾರೆ.