ಮಂಡ್ಯ: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಭಾರತೀನಗರದಲ್ಲಿ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ.
ಪೋಷಕರು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ತನ್ನ ಮನೆ ಬಳಿ ಆಟವಾಡುತ್ತಿದ್ದಾಗ, ಸಿದ್ದರಾಮು (62) ಎಂಬ ವೃದ್ಧ ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ದೌರ್ಜನ್ಯ ಎಸಗಿದ್ದಾನೆ.
ಇದನ್ನು ಓದಿ –ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಇಂದು ಬಂದ್‌ಗೆ ಕರೆ
ಈ ಘಟನೆ ಕುರಿತು ಬಾಲಕಿಯ ತಾಯಿ ಭಾರತೀನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.