- ಸಾರ್ವಜನಿಕರಿಗೆ ಎಚ್ಚರಿಕೆ ಸೂಚನೆ
ಮೈಸೂರು : ಚಾಮುಂಡಿ ಬೆಟ್ಟದ ದೇವಿಕೆರೆ ಕಟ್ಟೆ ಹಾಗೂ ತಾವರೆಕಟ್ಟೆ ಜನವಸತಿ ಪ್ರದೇಶಗಳಲ್ಲಿ ಚಿರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸಲು ಸೂಚಿಸಿದೆ.
ಇತ್ತೀಚೆಗೆ ಚಾಮುಂಡಿ ಬೆಟ್ಟ ಸುತ್ತಮುತ್ತ ಚಿರತೆಯ ಚಲನವಲನ ಹೆಚ್ಚಾಗಿರುವುದಾಗಿ ವರದಿಯಾಗಿದ್ದು, ಇದರಿಂದ ಸ್ಥಳೀಯರು ಹಾಗೂ ಭಕ್ತರಲ್ಲಿ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿ, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ತಿಳಿಸಿದೆ.
ಸಂಜೆ ಮತ್ತು ಬೆಳಗಿನ ಸಮಯಗಳಲ್ಲಿ, ವಿಶೇಷವಾಗಿ ಕತ್ತಲಾದ ನಂತರ ಒಂಟಿಯಾಗಿ ಹೊರಗೆ ಹೋಗದಂತೆ ಸೂಚಿಸಲಾಗಿದೆ. ಚಾಮುಂಡಿ ಬೆಟ್ಟ ಮೀಸಲು ಅರಣ್ಯ ಪ್ರದೇಶವು 17 ಕಿ.ಮೀ ವಿಸ್ತಾರವಿದ್ದು, ನಾಲ್ಕು ಗೇಟ್‌ಗಳನ್ನು ಹೊಂದಿದೆ. ಹೊಸಹುಂಡಿಯಿಂದ ಚಾಮುಂಡಿಬೆಟ್ಟ ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಯ ಸಂಚಾರವನ್ನು ಸಂಜೆ 6 ಗಂಟೆಯಿಂದ ಬೆಳಗ್ಗೆ 6 ರವರೆಗೆ ನಿಷೇಧಿಸಲಾಗಿದೆ.ಇದನ್ನು ಓದಿ –ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಕುಟುಂಬದ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – FIR ದಾಖಲು
ಚಾಮುಂಡಿ ಬೆಟ್ಟದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಚಿರತೆಯ ಸಂಚಾರವನ್ನು ಪತ್ತೆಹಚ್ಚಲು ರಾತ್ರಿ ಪಹರೆ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಹೊಸ ಮಾಹಿತಿ ದೊರಕಿದ ಕೂಡಲೇ ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಇಲಾಖೆ ತಿಳಿಸಿದೆ.