ಬೆಂಗಳೂರು : ರಾಜ್ಯದಲ್ಲಿ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಂಡಿದ್ದು, ಇಂದಿನಿಂದ ಭಾರೀ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿಯೂ ಮಳೆಯಾಗಲಿದೆ. ಇದರಿಂದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ಪ್ರಕಟಿಸಿದೆ.
ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಇದನ್ನು ಓದಿ –ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕಾರ
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾವೇರಿ, ಚಾಮರಾಜನಗರ, ಹಾಸನ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.