ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಡಿವೈಡರ್ ಗೆ ಢಿಕ್ಕಿ ಹೊಡೆದ ಟ್ರಕ್ ಹರಿದು 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮೊಸಳೆ ಹೊಸಹಳ್ಳಿ ಶುಕ್ರವಾರ ರಾತ್ರಿ ನಡೆದಿದೆ.
ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ತೆರಳುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಜನರ ಗುಂಪಿನ ಮೇಲೆ ನುಗ್ಗಿದ್ದು ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು ಹೇಳಲಾಗಿದೆ.
ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.ಇದನ್ನು ಓದಿ –ಬೆಂಗಳೂರಿನ ಫೋಥಿಸ್ ಬಟ್ಟೆ ಶೋ ರೂಮ್ ಮೇಲೆ IT ದಾಳಿ
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.