ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ಪ್ರಕರಣದಲ್ಲಿ ನಿವೃತ್ತ ಯೋಧನೊಬ್ಬರನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ವಸಂತ್ ಕುಮಾರ್ (40) ಎಂದು ಗುರುತಿಸಲಾಗಿದೆ. ಸಕಲೇಶಪುರ ಮೂಲದ ವಸಂತ್ ಕುಮಾರ್ ನಿವೃತ್ತ ಯೋಧನಾಗಿದ್ದು, ಸೇವೆ ನಂತರ ಗ್ರಾಮದಲ್ಲಿ ಕೃಷಿ ಮಾಡುತ್ತ ಜೀವನ ಸಾಗಿಸುತ್ತಿದ್ದರು.
ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕನ್ನಡ ಬರುತ್ತದೆಯೇ? ಎಂದು ಸಿಎಂ ಸಿದ್ದರಾಮಯ್ಯ ಕೇಳಿದ ಹಿನ್ನೆಲೆಯಲ್ಲಿ, “ಹನುಮ ಭಕ್ತ” ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ವಸಂತ್ ಕುಮಾರ್ ಸಿಎಂ ವಿರುದ್ಧ ಏಕವಚನದಲ್ಲಿ ಅಸಭ್ಯ ಶಬ್ದಗಳಲ್ಲಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.ಇದನ್ನು ಓದಿ –ಶಬರಿಮಲೆ ದೇಗುಲದ ವಿಗ್ರಹದಿಂದ 4.5 ಕೆಜಿ ಚಿನ್ನ ನಾಪತ್ತೆ – ಹೈಕೋರ್ಟ್ ತನಿಖೆಗೆ ಆದೇಶ
ಈ ಹಿನ್ನೆಲೆಯಲ್ಲಿ, ಸಿಸಿಬಿ ಸೈಬರ್ ಪೊಲೀಸರು ವಸಂತ್ ಕುಮಾರ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.