ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಸೆಪ್ಟೆಂಬರ್ 27ರವರೆಗೆ ಮಳೆಯ ಸಾಧ್ಯತೆ ಇದೆ.
ಇದೆ ವೇಳೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ನೀಡಲಾಗಿದೆ.ಇದನ್ನು ಓದಿ –ನಾಡದೇವಿ ಚಾಮುಂಡೇಶ್ವರಿ ದರ್ಶನದಿಂದ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ
ಬೆಂಗಳೂರು ನಗರದಲ್ಲಿ ರಾತ್ರಿಯಿಡೀ ಮಳೆ ಸುರಿದಿದ್ದು, ಮೋಡ ಕವಿದ ವಾತಾವರಣ ಮುಂದುವರಿದಿದೆ. ಸಂಜೆ ವೇಳೆಗೆ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.








