By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಕೋಪವೆಂಬುದನರ್ಥ
    July 2, 2026
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
  • Sports
  • National
  • International
  • Crime
Reading: ಮಂಡ್ಯ : ಡೈರಿಯಲ್ಲಿ ಭ್ರಷ್ಟಾಚಾರ ಆರೋಪ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Mandya > ಮಂಡ್ಯ : ಡೈರಿಯಲ್ಲಿ ಭ್ರಷ್ಟಾಚಾರ ಆರೋಪ
KarnatakaMandya

ಮಂಡ್ಯ : ಡೈರಿಯಲ್ಲಿ ಭ್ರಷ್ಟಾಚಾರ ಆರೋಪ

Team Varthaman
Last updated: October 7, 2025 11:51 AM
Team Varthaman
Published: October 7, 2025
Share
SHARE
  • ಅಧ್ಯಕ್ಷೆ, ಕಾರ್ಯದರ್ಶಿ ಮನೆ ಮುಂದೆ ಹಾಲು ಸುರಿದು ಗ್ರಾಮಸ್ಥರ ಪ್ರತಿಭಟನೆ

ಮಂಡ್ಯ: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಡೈರಿ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಯ ಮನೆ ಮುಂದೆ ಹಾಲು ಸುರಿದು ಪ್ರತಿಭಟನೆ ನಡೆಸಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಐಕನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಗ್ರಾಮಸ್ಥರ ಪ್ರಕಾರ, ಐಕನಹಳ್ಳಿಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಕಳೆದ ಕೆಲವು ತಿಂಗಳಿನಿಂದ ಹಣಕಾಸು ವ್ಯವಹಾರಗಳಲ್ಲಿ ಗಂಭೀರ ಅಕ್ರಮಗಳು ನಡೆಯುತ್ತಿದ್ದು, ಇದರ ಪರಿಣಾಮವಾಗಿ ಷೇರುದಾರರು ಮತ್ತು ಹಾಲು ಉತ್ಪಾದಕರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ. ಸಂಘದ ಆರ್ಥಿಕ ಸ್ಥಿತಿಗೂ ದೊಡ್ಡ ಹೊಡೆತ ಬಿದ್ದಿದ್ದು, ಸಂಸ್ಥೆಯ ವಿಶ್ವಾಸಾರ್ಹತೆಯ ಮೇಲೆಯೂ ಅನುಮಾನ ವ್ಯಕ್ತವಾಗಿದೆ.

Join WhatsApp Group

ಈ ಕುರಿತು ಗ್ರಾಮಸ್ಥರು ಹಲವು ಬಾರಿ ಆಡಳಿತ ಮಂಡಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗದ ಕಾರಣ ಕೊನೆಗೆ ಅವರು ಕೋಪಗೊಂಡು ಡೈರಿ ಅಧ್ಯಕ್ಷೆ ರಾಧಾ ಹಾಗೂ ಕಾರ್ಯದರ್ಶಿ ಯಶೋಧಾ ಅವರ ಮನೆ ಮುಂದೆ ಹಾಲು ಸುರಿದು ಪ್ರತಿಭಟನೆ ನಡೆಸಿದ್ದಾರೆ.

ಗ್ರಾಮಸ್ಥರು ಸಂಘದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತಕ್ಷಣ ತನಿಖೆ ನಡೆಸಿ, ದುರುಪಯೋಗ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಜೊತೆಗೆ, ಸಂಘದ ಹಣವನ್ನು ದುರುಪಯೋಗ ಮಾಡಿದವರು ಮತ್ತೆ ಸಂಘಕ್ಕೆ ಮರುಪಾವತಿಸಬೇಕೆಂದು ಬೇಡಿಕೊಂಡಿದ್ದಾರೆ.ಇದನ್ನು ಓದಿ –ಮುಂದಿನ 6 ತಿಂಗಳಲ್ಲಿ ಪೆಟ್ರೋಲ್ ದರದಷ್ಟೇ ಇವಿ ಬೆಲೆ: ನಿತಿನ್ ಗಡ್ಕರಿ

ಸ್ಥಳೀಯರು ಸರ್ಕಾರ ಮತ್ತು ಹಾಲು ಮಹಾಮಂಡಳಿಯಿಂದ ಕೂಡ ತನಿಖೆ ನಡೆಸಿ ಸತ್ಯ ಹೊರತರುವಂತೆ ಮನವಿ ಮಾಡಿದ್ದಾರೆ. ಈ ಘಟನೆ ಗ್ರಾಮದಲ್ಲಿ ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿದ್ದು, ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

  • ಬಿಡದಿ ಟೌನ್‌ಶಿಪ್‌: ಭೂಮಿ ನೀಡುವ ರೈತರ ಜಮೀನು ಪಡೆಯುತ್ತೇವೆ – ಡಿಕೆಶಿ
    by Team Varthaman
    August 11, 2026
  • ರಾಜ್ಯಕ್ಕೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು?
    by Team Varthaman
    August 11, 2026
  • ಎಸ್‌ಐಆರ್ ಪ್ರಕ್ರಿಯೆ ಆ.17ರವರೆಗೆ ವಿಸ್ತರಣೆ
    by Team Varthaman
    August 11, 2026
  • ‘ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ವಿಪಕ್ಷಗಳ ಸಂಚು’: ಡಿಕೆಶಿ ಆರೋಪ
    by Team Varthaman
    August 10, 2026
  • ‘ಆಪರೇಷನ್ ಮುಕ್ತ’; 4 ಶಂಕಿತ ಬಾಂಗ್ಲಾದೇಶಿ ವಶಕ್ಕೆ
    by Team Varthaman
    August 8, 2026
ಚಾ.ನಗರ ಭೂಮಿ ವಿಚಾರದಲ್ಲಿ ಆತಂಕಬೇಡ: ಪ್ರಮೋದದೇವಿ
ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿಕೆಶಿ ಪ್ರಮಾಣವಚನ
ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್‌ಗೆ ಷರತ್ತುಬದ್ಧ ಜಾಮೀನು
ಖರ್ಗೆ ಕುಟುಂಬದ ವಿರುದ್ಧ ಭೂ ಮಂಜೂರಾತಿ ಅಕ್ರಮ ಆರೋಪ
ಕಾಂಗ್ರೆಸ್‌ ನಿರ್ನಾಮಕ್ಕೆ ತುಮಕೂರು ಸಮಾವೇಶ: ಎಚ್‌ಡಿಕೆ
TAGGED:breakingnewsK R PetelatestnewsMandya newsmilk dairyಭ್ರಷ್ಟಾಚಾರ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
KarnatakaMysoreMysuru Dasara 2025

ದಸರಾ ಕಳೆ ಹೆಚ್ಚಿಸಿದ ಲೋಹದ ಹಕ್ಕಿಗಳ ರೋಮಾಂಚಕಾರಿ ವೈಮಾನಿಕ ಪ್ರದರ್ಶನ

Team Varthaman
Team Varthaman
September 25, 2025
58 ವರ್ಷದ ಮಾಲಾಧಾರಿ ಮಹಿಳೆ ಸಾವು
ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಆರಂಭ: ಡಿಸಿಎಂ ಡಿ.ಕೆ. ಶಿವಕುಮಾರ್
ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ-2 ಪ್ರಾರಂಭ
ರೇಣುಕಾಸ್ವಾಮಿ ಕೊಲೆ: ದರ್ಶನ್ , ಪವಿತ್ರಾ ಸೇರಿ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಫ್ರೆಮ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?