ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳ ಮಳೆಯ ಅಬ್ಬರ ಸ್ವಲ್ಪ ತಗ್ಗಿದರೂ, ಇನ್ನೂ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಅಂದಾಜು ವ್ಯಕ್ತವಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಕೋಲಾರ, ಯಾದಗಿರಿ, ಕಲಬುರಗಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಬೆಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಇದನ್ನು ಓದಿ –1 ಲಕ್ಷ ಗಡಿ ದಾಟಿದ ಚಿನ್ನದ ಬೆಲೆ
ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕೊಪ್ಪಳ, ಹಾವೇರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








