By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ಸೆಂಥಿಲ್‌ ಮಾನಹಾನಿ ಪ್ರಕರಣ | ಜನಾರ್ದನ ರೆಡ್ಡಿಗೆ ನ್ಯಾಯಾಲಯದ ನೋಟಿಸ್‌
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಸೆಂಥಿಲ್‌ ಮಾನಹಾನಿ ಪ್ರಕರಣ | ಜನಾರ್ದನ ರೆಡ್ಡಿಗೆ ನ್ಯಾಯಾಲಯದ ನೋಟಿಸ್‌
BengaluruKarnatakaMain News

ಸೆಂಥಿಲ್‌ ಮಾನಹಾನಿ ಪ್ರಕರಣ | ಜನಾರ್ದನ ರೆಡ್ಡಿಗೆ ನ್ಯಾಯಾಲಯದ ನೋಟಿಸ್‌

Team Varthaman
Last updated: October 15, 2025 4:12 PM
Team Varthaman
Published: October 15, 2025
Share
SHARE

ಬೆಂಗಳೂರು:ತಮಿಳುನಾಡಿನ ತಿರುವಳ್ಳೂರು ಕಾಂಗ್ರೆಸ್‌ ಸಂಸದ ಶಶಿಕಾಂತ್ ಸೆಂಥಿಲ್ ದಾಖಲಿಸಿರುವ ಮಾನಹಾನಿ ಮೊಕದ್ದಮೆ ಸಂಬಂಧ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ.

ಜನಾರ್ದನ ರೆಡ್ಡಿ ಅವರು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಆಧಾರರಹಿತ ಹೇಳಿಕೆಗಳನ್ನು ನೀಡಿ ಮಾನಹಾನಿಯುಂಟು ಮಾಡಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಮಾಜಿ ಐಎಎಸ್‌ ಅಧಿಕಾರಿಯೂ ಆದ ತಮಿಳುನಾಡಿನ ಶಶಿಕಾಂತ್ ಸೆಂಥಿಲ್ ಸಲ್ಲಿಸಿರುವ ಖಾಸಗಿ ದೂರನ್ನು ಬೆಂಗಳೂರಿನ ವಿಶೇಷ ಜುಡಿಷಿಯಲ್ ಮ್ಯಾಜಿಸ್ಟ್ರೇಟ್‌ ಕೆ ಎನ್‌ ಶಿವಕುಮಾರ್ ವಿಚಾರಣೆ ನಡೆಸಿದರು.

Join WhatsApp Group

ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 223ರ ಅನುಸಾರ ದೂರುದಾರ ಶಶಿಕಾಂತ ಸೆಂಥಿಲ್ ಹಾಗೂ ಸಾಕ್ಷಿಯಾದ ಕಿರಣ್‌ಜಿತ್ ಅವರ ಸ್ವಯಂ ಹೇಳಿಕೆಗಳನ್ನು ದಾಖಲಿಸಿಕೊಂಡ ನ್ಯಾಯಾಲಯವು ಸೆಕ್ಷನ್ 223 ಅಡಿಯಲ್ಲಿ ಆರೋಪಿಯ ವಾದ ಆಲಿಸಲು ಜನಾರ್ದನ ರೆಡ್ಡಿ ಅವರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿತು.

ಶಶಿಕಾಂತ್ ಸೆಂಥಿಲ್ ಪರ ವಕೀಲರಾದ ಸೂರ್ಯ ಮುಕುಂದರಾಜ್‌ ಮತ್ತು ಸಂಜಯ ಯಾದವ್‌ ಹಾಜರಿದ್ದರು.

ಬಿಎನ್‌ಎಸ್‌ಎಸ್‌ ಸೆಕ್ಷನ್‌ 223ರ ಪ್ರಕಾರ ಖಾಸಗಿ ದೂರಿನ ಸಂಬಂಧ ಸಂಜ್ಞೇ ಪರಿಗಣಿಸುವುದಕ್ಕೂ ಮುನ್ನ ಮ್ಯಾಜಿಸ್ಟ್ರೇಟ್ ದೂರುದಾರರ ಸ್ವಯಂಹೇಳಿಕೆ ಹಾಗೂ ಪ್ರಕರಣದಲ್ಲಿ ಸಾಕ್ಷಿಗಳಿದ್ದಲ್ಲಿ ಅವರ ಹೇಳಿಕೆಗಳನ್ನೂ ದಾಖಲಿಸಿಕೊಳ್ಳಬೇಕು. ಆ ಬಳಿಕ ಆರೋಪಿಗೆ ಕಡ್ಡಾಯವಾಗಿ ನೋಟಿಸ್ ಜಾರಿಗೊಳಿಸಿ ಅವರ ಅಹವಾಲನ್ನೂ ಆಲಿಸಬೇಕು.

ಪ್ರಕರಣದ ಹಿನ್ನೆಲೆ: ಸೆಂಥಿಲ್‌ ದಾಖಲಿಸಿರುವ ದೂರಿನ ಸಾರಾಂಶವೆಂದರೆ ಗಾಲಿ ಜನಾರ್ದನ ರೆಡ್ಡಿ ಅವರು ರಾಜಕೀಯ ದುರುದ್ದೇಶದಿಂದ ಸೆಂಥಿಲ್‌ ಅವರ ಹೆಸರನ್ನು ಉಲ್ಲೇಖಿಸಿ ಆಧಾರಹಿತ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಸೆಂಥಿಲ್ ಅವರು ಈ ಹಿಂದೆ ಬಳ್ಳಾರಿಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಶಾಸಕರಾಗಿದ್ದರು. ಬಳ್ಳಾರಿಯಲ್ಲಿ ರೆಡ್ಡಿ ಎಸಗಿದ್ದ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಇಸಿ ಮತ್ತು ಸಿಬಿಐಗೆ ನೆರವು ನೀಡಿದ್ದ ಸೆಂಥಿಲ್, ಹಲವು ಕ್ರಮಗಳನ್ನು ಬಯಲು ಮಾಡಿದ್ದರು. ಇದರಿಂದ, ಜನಾರ್ದನ ರೆಡ್ಡಿ ದ್ವೇಷ ಸಾಧಿಸುತ್ತಿದ್ದರು. 2025ರ ಆಗಸ್ಟ್ 18ರಿಂದ 21ರ ನಡುವೆ ರಾಜ್ಯದ ಹಲವು ಪ್ರಾದೇಶಿಕ ಸುದ್ದಿವಾಹಿನಿಗಳಿಗೆ ಹೇಳಿಕೆ ನೀಡಿರುವ ರೆಡ್ಡಿ, ಶಶಿಕಾಂತ ಅವರನ್ನು ‘ಹಿಂದು ವಿರೋಧಿ’, ಧರ್ಮಸ್ಥಳ ಪ್ರಕರಣದ ಹಿಂದಿನ ‘ಮಾಸ್ಟರ್ ಮೈಂಡ್’ ಹಾಗೂ “ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಖ್ಯಾತಿ ತರಲು ಕೆಲ ವ್ಯಕ್ತಿಗಳ ಮೂಲಕ ‘ಪ್ರಚೋದನೆ’ ನೀಡುತ್ತಿದ್ದಾರೆ” ಎಂದು ಆಧಾರರಹಿತ ಆರೋಪ ಮಾಡಿದ್ದಾರೆ. ಈ ಹೇಳಿಕೆಗಳನ್ನು ಕೆಲ ಮುದ್ರಣ ಮಾಧ್ಯಮಗಳೂ ವರದಿ ಮಾಡಿವೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಇದನ್ನು ಓದಿ –ರಾಜ್ಯದಲ್ಲಿ SSLC, PUC ಉತ್ತೀರ್ಣ ಅಂಕ ಇಳಿಕೆ: 33 ಅಂಕ ಬಂದ್ರೂ ಪಾಸ್ ಘೋಷಣೆ

ಆರೋಪಿಯ ದುರುದ್ದೇಶಪೂರಿತ ಹೇಳಿಕೆಗಳಿಂದ ದೂರುದಾರರ ಖ್ಯಾತಿಗೆ ಹಾಗೂ ಸಮಾಜದಲ್ಲಿ ಅವರ ಸ್ಥಾನಮಾನಕ್ಕೆ ತೀವ್ರ ಹಾನಿಯುಂಟಾಗಿದೆ. ಜನರು ಅವರನ್ನು ಅನುಮಾನದ ದೃಷ್ಟಿಯಿಂದ ನೋಡುತ್ತಿದ್ದು, ಇದರಿಂದ, ದೂರುದಾರರು ತೀವ್ರ ಖಿನ್ನತೆಗೆ ಒಳಗಾಗಿದ್ದಾರೆ. ಸಂಸತ್ ಸದಸ್ಯರಾಗಿರುವ ಅವರ ಕೆಲಸದ ಮೇಲೂ ಪರಿಣಾಮ ಬೀರಿದೆ. ಆದ್ದರಿಂದ, ದೂರು ದಾಖಲಿಸಿಕೊಂಡು ಆರೋಪಿಯ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 356 (1) ಮತ್ತು 356(2) ರ ಅಡಿಯಲ್ಲಿ ಕ್ರಮ ಜರುಗಿಸಬೇಕು ಎಂದು ಖಾಸಗಿ ದೂರಿನಲ್ಲಿ ಮನವಿ ಮಾಡಲಾಗಿದೆ.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
    February 1, 2026
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
    February 1, 2026
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
    January 30, 2026
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
    January 30, 2026
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
    January 30, 2026
ಜಮ್ಮು-ಕಾಶ್ಮೀರದಲ್ಲಿ ಭೀಕರ ಮಳೆ, ಪ್ರವಾಹ ಮತ್ತು ಭೂ ಕುಸಿತ
ಬೆಂಗಳೂರು-ತುಮಕೂರು “ನಮ್ಮ ಮೆಟ್ರೋ” ಯೋಜನೆಗೆ ಶೀಘ್ರದಲ್ಲಿ ಅನುಮೋದನೆ
ಗಡಿ ಉಸ್ತುವಾರಿ ಸಚಿವರಾಗಿ ಹೆಚ್.ಕೆ. ಪಾಟೀಲ್ ನೇಮಕ
ಕಾವೇರಿ ನದಿ ಪ್ರವಾಹ ಭೀತಿ: ಪ್ರವಾಸಿ ತಾಣಗಳಿಗೆ ತಾತ್ಕಾಲಿಕ ಪ್ರವೇಶ ನಿರ್ಬಂಧ
ಕೆ. ಸುಧಾಕರ್ ಹೆಸರು ಉಲ್ಲೇಖಿಸಿ ಕಾರು ಚಾಲಕ ಆತ್ಮಹತ್ಯೆ
TAGGED:breakingnewslatestnewsಜನಾರ್ದನ ರೆಡ್ಡಿಮಾನಹಾನಿ ಪ್ರಕರಣಸೆಂಥಿಲ್‌
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Main NewsNew DelhiTrending

ಆರ್‌ಬಿಐ REPO ದರ ಶೇ. 5.50ಕ್ಕೆ ಇಳಿಕೆ

Team Varthaman
Team Varthaman
June 6, 2025
ಐಷಾರಾಮಿ ವಸ್ತುಗಳ ಮಾರಾಟಕ್ಕೆ TCS ಅನಿವಾರ್ಯ
ಪತ್ನಿಯಿಂದ ರಾಜ್ಯದ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ?
ಮೇ 10ರಂದು ದೇಶದಾದ್ಯಂತ ಕಾಮೆಡ್-ಕೆ ಪರೀಕ್ಷೆ
ಏಷ್ಯಾಕಪ್ ಪಂದ್ಯದ ಶುಲ್ಕವನ್ನು ಪಹಲ್ಗಾಮ್ ಸಂತ್ರಸ್ತರಿಗೆ ದೇಣಿಗೆ ನೀಡಿದ ಸೂರ್ಯಕುಮಾರ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?