ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಗಳಿಗೆ ಬಾಂಬ್ ಸ್ಫೋಟದ ಬೆದರಿಕೆ ಇಮೇಲ್ ಬಂದ ಘಟನೆ ಆತಂಕ ಉಂಟುಮಾಡಿದೆ. ಈ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
“ನಿಮ್ಮ ಮನೆಗೆ ಆರ್‌ಡಿಎಕ್ಸ್ ಬಾಂಬ್ ಇಟ್ಟಿದ್ದೇವೆ, ಅದು ಸ್ಪೋಟಗೊಳ್ಳಲಿದೆ” ಎಂಬ ವಿಷಯವಿರುವ ಬೆದರಿಕೆ ಇಮೇಲ್‌ನ್ನು ಅರ್ನಾ ಅಶ್ವಿನ್ ಶೇಖರ್ ಎಂಬ ಖಾತೆಯಿಂದ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಸಿಎಂ ಮತ್ತು ಡಿಸಿಎಂ ನಿವಾಸಗಳಿಗೆ ಭೇಟಿ ನೀಡಿ ಶೋಧ ಕಾರ್ಯ ನಡೆಸಿದರು. ತನಿಖೆಯ ನಂತರ ಅದು ಹುಸಿ ಬಾಂಬ್ ಸಂದೇಶ ಎಂದು ದೃಢಪಟ್ಟಿದೆ.ಇದನ್ನು ಓದಿ –100 ದಿನಗಳ ವಿಶ್ರಾಂತಿಯ ಬಳಿಕ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಪ್ರವೇಶ
ಈ ಕುರಿತು ಅಶ್ವತ್ ನಾರಾಯಣ ಸ್ವಾಮಿ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ.








