ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ 18,000 ಉಪನ್ಯಾಸಕ ಹಾಗೂ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಖಾಲಿ ಇರುವ 10,000ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (TET) ನಡೆಸಲಾಗುತ್ತಿದ್ದು, ನಂತರ ಸಿಇಟಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದರು.
ಇದಲ್ಲದೆ, ರಾಜ್ಯದ ಶಾಲಾ ಶಿಕ್ಷಣವನ್ನು ಬಲಪಡಿಸಲು ಪ್ರಥಮ ಬಾರಿಗೆ 800 ಸರ್ಕಾರಿ ಶಾಲೆಗಳನ್ನು “ಕರ್ನಾಟಕ ಪಬ್ಲಿಕ್ ಶಾಲೆ”ಗಳಾಗಿ (Karnataka Public Schools) ಉನ್ನತೀಕರಿಸುವ ಯೋಜನೆ ರೂಪಿಸಲಾಗಿದೆ.ಇದನ್ನು ಓದಿ –ಸಿಎಂ ಮತ್ತು ಡಿಸಿಎಂ ಮನೆಗೆ ಬಾಂಬ್ ಬೆದರಿಕೆ ಇಮೇಲ್: FIR ದಾಖಲು
ಈ ಯೋಜನೆಯಡಿ ಪ್ರತಿಯೊಂದು ಶಾಲೆಯೂ ಸುಮಾರು ₹4 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಈ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿಯುಸಿ ವರೆಗೆ ಒಂದೇ ಕಟ್ಟಡದಡಿ ಶಿಕ್ಷಣ ಪಡೆಯುವ ವ್ಯವಸ್ಥೆ ಇರಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.








