ಬೆಂಗಳೂರು: ಬೆಂಗಳೂರು ಮೆಟ್ರೊದ ಗುಲಾಬಿ ಮಾರ್ಗ 2026ರ ಮೇ ತಿಂಗಳಲ್ಲಿ ಚಾಲನೆ ಪಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
‘ಎಕ್ಸ್’ ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಡಿಕೆಶಿ ಅವರು, “ಕಾಳೇನ ಅಗ್ರಹಾರದಿಂದ ನಾಗವಾರವನ್ನು ಸಂಪರ್ಕಿಸುವ ನಮ್ಮ ಮೆಟ್ರೊ ಗುಲಾಬಿ ಮಾರ್ಗ 2026ರ ಮೇನಲ್ಲಿ ಆರಂಭವಾಗಲಿದೆ. 13.76 ಕಿಲೋಮೀಟರ್ ಉದ್ದದ ಈ ಮಾರ್ಗವು ದಕ್ಷಿಣ ಮತ್ತು ಉತ್ತರ ಬೆಂಗಳೂರನ್ನು ನೇರವಾಗಿ ಸಂಪರ್ಕಿಸಲಿದ್ದು, ನಗರ ಸಾರಿಗೆಗೆ ಹೊಸ ವೇಗ ನೀಡಲಿದೆ,” ಎಂದು ತಿಳಿಸಿದ್ದಾರೆ.
ಇದನ್ನು ಓದಿ –ರೇಣುಕಾಸ್ವಾಮಿ ಕೊಲೆ: ದರ್ಶನ್ , ಪವಿತ್ರಾ ಸೇರಿ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಫ್ರೆಮ್
ಅವರು ಮುಂದುವರಿಸಿ, “ಬೆಂಗಳೂರು ಮೆಟ್ರೊ ವಿಸ್ತರಣೆ ಮತ್ತು ಉತ್ತಮ ಸಂಪರ್ಕಕ್ಕಾಗಿ ಸರ್ಕಾರ ಬದ್ಧವಾಗಿದೆ. ಪ್ರತಿ ಭಾಗಕ್ಕೂ ಸುಗಮ ಸಾರಿಗೆ ಸೌಲಭ್ಯ ಒದಗಿಸುವ ನಮ್ಮ ಗುರಿ ಮುಂದುವರಿಯುತ್ತದೆ,” ಎಂದು ಹೇಳಿದ್ದಾರೆ.








