ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಸೋಮವಾರ ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದೆ.
ಪಾರ್ವತಿ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಇರುವಂತ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪತ್ನಿ ಪಾರ್ವತಿ ಅವರು ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಸಿಎಂ ಸಿದ್ಧರಾಮಯ್ಯ ದೆಹಲಿ ಪ್ರಯಾಣವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ವಾಪಾಸ್ ಆಗುತ್ತಿರುವುದಾಗಿ ಗೊತ್ತಾಗಿದೆ.








