ಕೊಪ್ಪಳ: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಪೈಪೋಟಿ ತೀವ್ರಗೊಂಡಿರುವ ನಡುವೆಯೇ, ದಲಿತ ಸಿಎಂ ಬೇಡಿಕೆ ಮತ್ತಷ್ಟು ಜೋರಾಗಿದೆ.
ಈ ಹಿನ್ನೆಲೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಅವಕಾಶ ದೊರೆತರೆ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದವರನ್ನೇ ಮುಖ್ಯಮಂತ್ರಿ ಮಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವಕಾಶ ಸಿಕ್ಕರೆ ನಾವು ದಲಿತರನ್ನೇ ಮುಖ್ಯಮಂತ್ರಿ ಮಾಡುತ್ತೇವೆ. ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಈಗಾಗಲೇ ದಲಿತ ನಾಯಕರನ್ನು ಸಿಎಂ ಆಗಿ ನೇಮಿಸಿದೆ. ಕರ್ನಾಟಕದಲ್ಲೂ ಅವಕಾಶ ಬಂದರೆ ಅದೇ ರೀತಿಯಲ್ಲಿ ನಡೆದುಕೊಳ್ಳುತ್ತೇವೆ,” ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಅವರು, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಆಗುವ ಎಲ್ಲಾ ಅರ್ಹತೆಗಳಿವೆ ಎಂದು ಶ್ಲಾಘಿಸಿದರು.








