ಮೈಸೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ ಚಲಿಸುತ್ತಿರುವಾಗಲೇ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಬಳಿ ನಡೆದಿದೆ. ಈ ಘಟನೆಯಲ್ಲಿ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್‌ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡುದನ್ನು ಗಮನಿಸಿದ ಚಾಲಕ ತಕ್ಷಣ ಎಚ್ಚೆತ್ತುಕೊಂಡು ಹೊಸಳ್ಳಿ ಗೇಟ್ ಬಳಿ ಬಸ್ ನಿಲ್ಲಿಸಿ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಕೆಲವೇ ನಿಮಿಷಗಳಲ್ಲಿ ಬೆಂಕಿ ಸಂಪೂರ್ಣವಾಗಿ ವ್ಯಾಪಿಸಿ ಬಸ್‌ಗೆ ಆಹುತಿ ಪಡೆದಿದೆ.
ಘಟನೆ ಕುರಿತು ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಕಾಣಿಸಿಕೊಂಡ ಕಾರಣ ಕುರಿತು ತನಿಖೆ ನಡೆಸಲಾಗುತ್ತಿದೆ.








