ಬೆಂಗಳೂರು: 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ, ನಾನು ರಾಜಕಾರಣ ಮಾಡುವುದಕ್ಕಾಗಿಯೇ ಬಂದಿದ್ದೇನೆ. ಅದಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಈ ವಿಷಯದಲ್ಲಿ ಇನ್ನಷ್ಟು ಪ್ರಶ್ನೆಗಳು ಬೇಡ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಹಿರಿಯರು ಹಾಗೂ ವರಿಷ್ಠರು ಇದ್ದಾರೆ. ಈ ಕುರಿತು ಉತ್ತರ ನೀಡಬೇಕಾದವರು ಅವರೇ ಎಂದು ಹೇಳಿದರು.ಇದನ್ನು ಓದಿ –ರದ್ದಾದ ಬಿಪಿಎಲ್ ಕಾರ್ಡ್ ಮರುಪಡೆಯಲು 45 ದಿನಗಳ ಅವಕಾಶ
ಇನ್ನು ಸಿನಿಮಾ ಕ್ಷೇತ್ರಕ್ಕೆ ಮರಳುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಸಿನಿಮಾಗೆ ಈಗಾಗಲೇ ಗುಡ್ ಬೈ ಹೇಳಿದ್ದೇನೆ. ಸಿನಿಮಾಗಳಿಗೆ ಸಿಗುತ್ತಿರುವ ಟಿಆರ್‌ಪಿ ಸ್ಥಿತಿ ಎಲ್ಲರಿಗೂ ಗೊತ್ತಿದೆ. ಮುಂದಿನ ದಿನಗಳಲ್ಲಿ ನಾನು ರಾಜಕೀಯ ಕ್ಷೇತ್ರದಲ್ಲೇ ಹೆಚ್ಚು ಸಕ್ರಿಯವಾಗಿರುತ್ತೇನೆ ಎಂದು ತಿಳಿಸಿದರು.








