ಬೆಂಗಳೂರು: ಬೆಂಗಳೂರಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಈ ಅಪಘಾತ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರ ರಸ್ತೆಯಲ್ಲಿ ಸಂಭವಿಸಿದೆ.
ತ್ರಿಬಲ್ ರೈಡಿಂಗ್ ವೇಳೆ ಬೈಕ್‌ನಿಂದ ಆಯತಪ್ಪಿ ಕೆಳಗೆ ಬಿದ್ದ ಕಣಿರಾಜ್ (28) ಎಂಬ ಯುವಕನ ತಲೆಯ ಮೇಲೆ ಹಿಂಬದಿಯಿಂದ ಬಂದ ಬಿಎಂಟಿಸಿ ಬಸ್‌ನ ಹಿಂದಿನ ಚಕ್ರ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಇದನ್ನು ಓದಿ –ಶೀಘ್ರದಲ್ಲೇ ಸಿಎಂ-ಡಿಸಿಎಂ ನಿಯೋಗದೊಂದಿಗೆ ರಾಷ್ಟ್ರಪತಿ ಭೇಟಿ: ತಂಗಡಗಿ
ಘಟನೆಯ ಮಾಹಿತಿ ಪಡೆದ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.








