- ತನಿಖಾ ತಂಡಕ್ಕೆ ₹25 ಲಕ್ಷ ಬಹುಮಾನ
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ ₹25 ಲಕ್ಷ ನಗದು ಬಹುಮಾನ ಘೋಷಿಸಿದೆ.
ಈ ಪ್ರಕರಣದ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಎಸ್‌ಐಟಿ ತಂಡದ ಒಟ್ಟು 30 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಈ ಬಹುಮಾನ ನೀಡಲಾಗಿದೆ.
ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ. ಪನ್ನೇಕರ್, ಎಸ್‌ಪಿ ಸಿ.ಎ. ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್‌ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ ತಂಡದ ಸದಸ್ಯರು ಬಹುಮಾನಕ್ಕೆ ಪಾತ್ರರಾಗಿದ್ದಾರೆ.ಇದನ್ನು ಓದಿ –ಮುಡಾ ಹಗರಣ: 460ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ
ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ಪ್ರದರ್ಶಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸರ್ಕಾರ ವಿವಿಧ ದರ್ಜೆಗಳಲ್ಲಿ ನಗದು ಬಹುಮಾನ ಮಂಜೂರು ಮಾಡಿದ್ದು, ಒಟ್ಟಾರೆ ₹35 ಲಕ್ಷ ಬಹುಮಾನವನ್ನು ಪೊಲೀಸ್ ಇಲಾಖೆ ಘೋಷಿಸಿದೆ ಎಂದು ತಿಳಿದುಬಂದಿದೆ.








