By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ವಿಮಾನ ಪತನ : ಮಹಾರಾಷ್ಟ್ರ DCM ಅಜಿತ್‌ ಪವಾರ್‌ ಸೇರಿ ಐವರ ದುರ್ಮರಣ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Main News > ವಿಮಾನ ಪತನ : ಮಹಾರಾಷ್ಟ್ರ DCM ಅಜಿತ್‌ ಪವಾರ್‌ ಸೇರಿ ಐವರ ದುರ್ಮರಣ
Main NewsTrending

ವಿಮಾನ ಪತನ : ಮಹಾರಾಷ್ಟ್ರ DCM ಅಜಿತ್‌ ಪವಾರ್‌ ಸೇರಿ ಐವರ ದುರ್ಮರಣ

Team Varthaman
Last updated: January 28, 2026 11:52 AM
Team Varthaman
Published: January 28, 2026
Share
SHARE

ಮುಂಬೈ: ಮಹಾರಾಷ್ಟ್ರದ (Maharashtra) ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ (Ajit Pawar) ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ (Baramati) ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ.

ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದು, ಮುಂಬೈನಿಂದ ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೊರಟ ವಿಮಾನ ಒಂದು ಗಂಟೆಯ ನಂತರ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಸಮಯದಲ್ಲಿ ಅಪಘಾತಕ್ಕೀಡಾಯಿತು.

Join WhatsApp Group


ಪವಾರ್ ಸ್ಥಳೀಯ ಸಂಸ್ಥೆ ಚುನಾವಣೆಗೆ ಮುಂಚಿತವಾಗಿ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬೇಕಿತ್ತು.ಸ್ಥಳದಿಂದ ಬಂದ ದೃಶ್ಯಗಳಲ್ಲಿ ಬೆಂಕಿ ಮತ್ತು ಹೊಗೆ ದಟ್ಟವಾಗಿ ಆವರಿಸಿದೆ. ನಜ್ಜುಗುಜ್ಜಾದ ವಿಮಾನದ ಅವಶೇಷಗಳ ಮಧ್ಯೆ ದೇಹಗಳನ್ನು ಹೊರಕ್ಕೆ ತೆಗೆಯುತ್ತಿರುವ ದೃಶ್ಯಗಳು ಕಂಡುಬಂದಿವೆ.

ವಿಮಾನದಲ್ಲಿದ್ದ ಎಲ್ಲಾ ಐದು ಪ್ರಯಾಣಿಕರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

66 ವರ್ಷದ ಅಜಿತ್‌ ಪವಾರ್‌, ಹಿರಿಯ ರಾಜಕಾರಣಿ ಮತ್ತು ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರ ಸೋದರಳಿಯ ಮತ್ತು ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಅವರ ಸೋದರಸಂಬಂಧಿಯಾಗಿದ್ದರು. ಸಂಸತ್ತಿನ ಬಜೆಟ್ ಅಧಿವೇಶನಕ್ಕಾಗಿ ದೆಹಲಿಯಲ್ಲಿದ್ದ ಶರದ್ ಪವಾರ್ ಮತ್ತು ಸುಳೆ ಶೀಘ್ರದಲ್ಲೇ ಪುಣೆಗೆ ತೆರಳಲಿದ್ದಾರೆ.

2023ರಲ್ಲಿ ಅಜಿತ್ ಪವಾರ್ ನೇತೃತ್ವದಲ್ಲಿ ಎನ್‌ಸಿಪಿಯಲ್ಲಿ ಬಂಡಾಯ ಉಂಟಾಗಿ, ಪಕ್ಷವು ಎರಡು ಬಣಗಳಾಗಿ ವಿಭಜನೆಯಾಯಿತು. ಶರದ್ ಪವಾರ್ ಹಾಗೂ ಅಜಿತ್ ಪವಾರ್ ನೇತೃತ್ವದಲ್ಲಿ ಪ್ರತ್ಯೇಕ ಎನ್‌ಸಿಪಿ ಬಣಗಳು ರೂಪುಗೊಂಡವು. ನಂತರ ಅಜಿತ್ ಪವಾರ್ ಅವರು ಎನ್‌ಡಿಎ ಸರ್ಕಾರಕ್ಕೆ ಸೇರಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಎನ್‌ಸಿಪಿ ಪುನರ್ಮಿಲನದ ಕುರಿತು ಚರ್ಚೆಗಳು ನಡೆದಿದ್ದು, ಪಿಂಪ್ರಿ–ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಎರಡೂ ಬಣಗಳು ಒಟ್ಟಾಗಿ ಸ್ಪರ್ಧಿಸಿದ್ದವು.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ನಂದಿನಿ ತುಪ್ಪ ಕಲಬೆರಕೆ ಪ್ರಕರಣ: ಮುಖ್ಯ ಸೂತ್ರಧಾರ ದಂಪತಿ ಸಿಸಿಬಿ ವಶಕ್ಕೆ
ಸಿದ್ದು ಅವರು ದೇವರಾಜ ಅರಸು ಆಗಲು ಸಾಧ್ಯವಿಲ್ಲ: ಪ್ರತಾಪ್ ಸಿಂಹ
ಜೂನ್ 16ರಿಂದ RTI ಅರ್ಜಿಗಳಿಗೆ ಓಟಿಪಿ ಮೂಲಕ ಇ-ಮೇಲ್ ಪರಿಶೀಲನೆ ಕಡ್ಡಾಯ
ಬೆಟ್ಟಿಂಗ್ ಪ್ರಕರಣ: ಕ್ರಿಕೆಟಿಗ ಸುರೇಶ್ ರೈನಾ, ಶಿಖರ್ ಧವನ್ ಆಸ್ತಿ ಜಪ್ತಿ
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಂಡ್ಯ ರೈತ ಸಾವು
TAGGED:breakingnewsDCM Ajit Pawarlatestnewsplane crashಅಜಿತ್‌ ಪವಾರ್‌ವಿಮಾನ ಪತನ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
CrimeKarnatakashivmogga

ಕಾರ್ಯಪಾಲಕ ಇಂಜಿನಿಯರ್ ಮನೆ–ಕಚೇರಿ ಮೇಲೆ ಲೋಕಾಯುಕ್ತ ದಾಳಿ

Team Varthaman
Team Varthaman
December 16, 2025
ಮಂಡ್ಯ: ವೈದ್ಯಕೀಯ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು
ಮಹಿಷ ದಸರಾ ಆಚರಣೆ – ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ
ಘಾನಾದಿಂದ ಪ್ರಧಾನಿ ಮೋದಿಗೆ ರಾಷ್ಟ್ರೀಯ ಗೌರವ
ಭಾರತ-ಪಾಕ್‌ ತಕ್ಷಣವೇ ಕದನ ವಿರಾಮ ಘೋಷಣೆಗೆ ಸಮ್ಮತಿಸಿವೆ: ಟ್ರಂಪ್‌ ಟ್ವೀಟ್
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?