By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    February 1, 2026
    ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    February 1, 2026
    ಸಾವು ಬದುಕಿನ ನಡುವೆ
    January 28, 2026
    ವಾಸ್ತವ ವರ್ತಮಾನ
    January 24, 2026
    ಅರೋಗ್ಯ ಭಾಗ್ಯ
    January 24, 2026
  • Sports
  • National
  • International
  • Crime
Reading: ‘ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ನೀಡಲಿದೆ’ : ಡಿಸಿಎಂ ಡಿ.ಕೆ.ಶಿ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > shivmogga > ‘ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ನೀಡಲಿದೆ’ : ಡಿಸಿಎಂ ಡಿ.ಕೆ.ಶಿ
KarnatakaPoliticsshivmogga

‘ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ನೀಡಲಿದೆ’ : ಡಿಸಿಎಂ ಡಿ.ಕೆ.ಶಿ

Team Varthaman
Last updated: January 30, 2026 10:16 AM
Team Varthaman
Published: January 30, 2026
Share
SHARE

ಶಿವಮೊಗ್ಗ: ಮುಖ್ಯಮಂತ್ರಿ ಸ್ಥಾನ ಕುರಿತು ಮತ್ತೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕಾರ್ಯಕರ್ತರ ಪರಿಶ್ರಮದಿಂದ ಅಧಿಕಾರಕ್ಕೆ ಬಂದಿದೆ ಎಂದು ಪ್ರತಿಕ್ರಿಯಿಸಿದರು.

ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ವದಂತಿ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ವಿಪಕ್ಷದವರು ಯಾವಾಗಲೂ ಏನಾದರೂ ಆರೋಪ ಮಾಡುತ್ತಲೇ ಇರುತ್ತಾರೆ ಎಂದರು. ಯಾರೇ ಆಗಿರಲಿ, ಅಧಿಕಾರಿಗಳೊಂದಿಗೆ ಮಾತನಾಡುವುದರಲ್ಲಿ ತಪ್ಪೇನಿಲ್ಲ. ಕಾರ್ಯಕರ್ತರು ಸಮಸ್ಯೆಗಳನ್ನು ನಮ್ಮ ಮುಂದೆ ಇಡುತ್ತಾರೆ. ಆ ಸಂದರ್ಭಗಳಲ್ಲಿ ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಬೇಕಾಗುತ್ತದೆ. ಅದನ್ನು ಬಿಟ್ಟು ಬೇರೆ ಯಾವುದೇ ಹಸ್ತಕ್ಷೇಪ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

Join WhatsApp Group

ಬಿಜೆಪಿ–ಜೆಡಿಎಸ್ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ, ಗಾಂಧಿ ಹೆಸರನ್ನು ತೆಗೆದು ಹಾಕಿ, ಅದೇ ಗಾಂಧಿ ಪ್ರತಿಮೆಯ ಮುಂದೆ ಕುಳಿತು ಪ್ರತಿಭಟನೆ ನಡೆಸುವವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿ ಹೆಸರಿಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದರು.ಇದನ್ನು ಓದಿ –ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನ ಅವಧಿ ವಿಸ್ತರಣೆ

ಇದೇ ವೇಳೆ ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ಮೌಲ್ಯದ ಹಣ ಸಾಗಿಸುತ್ತಿದ್ದ ವಾಹನ ನಾಪತ್ತೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಸಿಬಿಐ ತನಿಖೆ ನಡೆಸಲಿ. ಹಣ ಎಲ್ಲಿಂದ ಬಂದಿತ್ತು ಎಂಬುದನ್ನು ಸ್ಪಷ್ಟಪಡಿಸಲಿ. ಅದನ್ನು ಕಾಂಗ್ರೆಸ್‌ಗೆ ಸೇರಿದೆ ಎಂದು ಹೇಳಿ ಸುಮ್ಮನೆ ನಗೆಪಾಟಲಿಗೀಡಾಗುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು.

  • ಅಜವಾನ ಅಜೀರ್ಣಕ್ಕೆ ಪ್ರಕೃತಿ ನೀಡಿದ ವರದಾನ
    by Team Varthaman
  • ಹೀಗೆ ಬಂದು ಹಾಗೆ ಹೋಗುವ ಸ್ನೇಹ ಸಾವಿರ
    by Team Varthaman
  • ಐಟಿ ದಾಳಿ ಭೀತಿ: ಕಾನ್ಫಿಡೆಂಟ್ ಅಧ್ಯಕ್ಷ ಡಾ.ಸಿ.ಜೆ.ರಾಯ್ ಆತ್ಮಹತ್ಯೆ
    by Team Varthaman
  • ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
    by Team Varthaman
  • ತಿರುಪತಿ ಲಡ್ಡು ಕಲಬೆರಕೆ ಪ್ರಕರಣ: ₹234 ಕೋಟಿ ವಂಚನೆ ಬಯಲು
    by Team Varthaman
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ – ₹4 ಕೋಟಿ ಮೌಲ್ಯದ ಎಂಡಿಎಂಎ ವಶ
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ ₹5 ಲಕ್ಷ ದಂಡ
ಮಡಿಕೇರಿ ಬಳಿ ಕಾರು-ಲಾರಿ ಡಿಕ್ಕಿ: ನಾಲ್ವರು ಯುವಕರು ದುರ್ಮರಣ
ಡಿಕೆಶಿ ದೆಹಲಿಗೆ ಪ್ರಯಾಣ: ಅಧಿಕಾರ ಹಂಚಿಕೆ ವಿಚಾರ ಮತ್ತೆ ಚರ್ಚೆಗೆ
ವಿಡಿಯೋ ವೈರಲ್ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು
TAGGED:breakingnewsDCM DKShiDK shivkumarKarnataka GovtlatestnewsPolitics
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
InternationalTrending

ಅಮೆರಿಕ ಒತ್ತಡದ ನಡುವೆಯೂ ಭಾರತ–ರಷ್ಯಾ S-400 ಕ್ಷಿಪಣಿ ಒಪ್ಪಂದ ಚರ್ಚೆ

Team Varthaman
Team Varthaman
September 3, 2025
ಯೋಧರಿಗೆ ಸಿಗುವ ಮದ್ಯದ ರಿಯಾಯಿತಿಗೆ ಕಡಿತ? ತೆರಿಗೆ ಹೆಚ್ಚಿಸಲು ಸರ್ಕಾರದ ಯೋಚನೆ
ಭಾರತಿ ಹೆಗ್ದೆ ನಿಧನ
ಸೆ.1ಕ್ಕೆ ಮೈಸೂರಿಗೆ  ರಾಷ್ಟ್ರಪತಿ ಆಗಮನ
ಹನುಮಾನ್‌ ಚಾಲೀಸ್‌ ಕೇಂದ್ರ ಸ್ಥಾಪನೆಯ ಗುರಿ: ಪ್ರವೀಣ ಭಾಯೀ ತೊಗಡಿಯಾ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?