By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ತನು -ಮನ ತಂಪಾಗಿಸೋ ತಂಪು ಬೀಜಗಳು
    March 21, 2026
    ಪತ್ರಿಕೋದ್ಯಮದ ದಿಗ್ಗಜ ಬ್ರಹ್ಮಪುರಿಯ ಅಲೆಮಾರಿ
    March 17, 2026
    ಅತಿಥಿ ದೇವೋಭವ 
    March 15, 2026
    ಖನಿಜದ ಆಗರ ಅಳಿವೆ ( ಹಲೀಮ್ ಸೀಡ್ಸ್ )
    March 15, 2026
    ದ್ವೇಷಕ್ಕೆ ಬೆಂಕಿ ಹಚ್ಚಬೇಕು
    March 8, 2026
  • Sports
  • National
  • International
  • Crime
Reading: ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Karnataka > Bengaluru > ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ
BengaluruKarnataka

ಅಕ್ರಮ ವಲಸಿಗರ ಪತ್ತೆ–ಗಡಿಪಾರಿಗೆ ವಿಶೇಷ ತಂಡ ರಚನೆ: ರಾಜ್ಯ ಸರ್ಕಾರ

Team Varthaman
Last updated: January 30, 2026 10:43 AM
Team Varthaman
Published: January 30, 2026
Share
SHARE

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ವಿಶೇಷ ತಂಡ ರಚಿಸಲಾಗುವುದು ಎಂದು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ತಿಳಿಸಿದೆ.

ವಿಧಾನಸಭೆಯಲ್ಲಿ ಬಿಜೆಪಿ ಉಚ್ಛಾಟಿತ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಅವರು, ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದ ಹಿಂದುತ್ವ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ನಡೆಯುತ್ತಿದೆ ಎಂಬುದಾಗಿ ಗಮನ ಸೆಳೆದ ಸೂಚನೆ ನೀಡಿದರು.ಇದಕ್ಕೆ ಗೃಹ ಸಚಿವರ ಪರವಾಗಿ ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ಉತ್ತರಿಸಿದರು.

Join WhatsApp Group

ಅಕ್ರಮ ವಲಸಿಗರ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದ ಹಿಂದೂ ಪರ ಕಾರ್ಯಕರ್ತರಿಗೆ ಪೊಲೀಸ್ ಇಲಾಖೆ ಯಾವುದೇ ಕಿರುಕುಳ ನೀಡಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಒಟ್ಟು 370 ಅಕ್ರಮ ವಲಸಿಗರು ಪತ್ತೆಯಾಗಿದ್ದು, ಅವರಲ್ಲಿ 213 ಮಂದಿಯನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ. ಉಳಿದ 157 ಮಂದಿಯ ವಿರುದ್ಧ ಅಕ್ರಮ ವಲಸಿಗರ ಬಂಧನ ಕೇಂದ್ರ (ಎಫ್‌ಡಿಸಿ)ಯಲ್ಲಿ ಪ್ರಕರಣಗಳು ದಾಖಲಾಗಿರುವುದರಿಂದ, ಅವರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಮುಂದುವರಿದಿದೆ ಎಂದು ಹೇಳಿದರು.

ಇದೇ ವೇಳೆ ಯತ್ನಾಳ್ ಮಾತನಾಡಿ, ರಾಜ್ಯದಲ್ಲಿ 25 ಲಕ್ಷಕ್ಕೂ ಹೆಚ್ಚು ಬಾಂಗ್ಲಾದೇಶಿಯರು ಅಕ್ರಮವಾಗಿ ನೆಲೆಸಿದ್ದು, ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಫಿ ತೋಟಗಳು, ಶಾಪಿಂಗ್ ಮಾಲ್‌ಗಳು ಹಾಗೂ ಐಟಿ–ಬಿಟಿ ಕಂಪನಿಗಳಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರು ನಕಲಿ ಆಧಾರ್ ಹಾಗೂ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ. ಇದು ದೊಡ್ಡ ಜಾಲವಾಗಿದ್ದು, ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಭಯಾನಕ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರಿನಲ್ಲಿ ಸುಮಾರು 1.40 ಕೋಟಿ ಜನಸಂಖ್ಯೆ ಇದೆ. ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಳ, ಬಿಹಾರ, ರಾಜಸ್ಥಾನ, ತೆಲಂಗಾಣ, ಆಂಧ್ರಪ್ರದೇಶ, ಕೇರಳ ಹಾಗೂ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಿಂದ ಲಕ್ಷಾಂತರ ಜನ ಇಲ್ಲಿ ವಾಸಿಸುತ್ತಿದ್ದಾರೆ. ಈ ಹಿಂದೆಯೂ ಬಾಂಗ್ಲಾದೇಶಿಯರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ದೂರುಗಳು ಬಂದಾಗ, ವಿಶೇಷ ತಂಡ ರಚಿಸಿ ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ವಿವಿಧ ಕಡೆಗಳ ಕಾಫಿ ಎಸ್ಟೇಟ್‌ಗಳಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.

ಅಕ್ರಮ ವಲಸಿಗರು ಎಲ್ಲಿಯೇ ಇದ್ದರೂ ಅವರನ್ನು ಪತ್ತೆಹಚ್ಚಿ ಗಡಿಪಾರು ಮಾಡಲಾಗುವುದು ಎಂದು ಸಚಿವರು ಹೇಳಿದರು. ಬಾಂಗ್ಲಾದೇಶದಿಂದ ಅಕ್ರಮ ವಲಸಿಗರು ದೇಶದೊಳಗೆ ನುಸುಳುವುದು ಬಾಂಗ್ಲಾದೇಶ ಗಡಿ ಹೊಂದಿರುವ ರಾಜ್ಯಗಳ ಮೂಲಕವೇ ಆಗುತ್ತದೆ. ಇದು ರಾಜ್ಯ ಸರ್ಕಾರದ ವೈಫಲ್ಯವಲ್ಲ, ಅಕ್ರಮ ಪ್ರವೇಶವನ್ನು ತಡೆಯಲು ವಿಫಲವಾದ ಕೇಂದ್ರ ಸರ್ಕಾರದ ಹೊಣೆಗಾರಿಕೆ ಎಂದು ಅವರು ಅಭಿಪ್ರಾಯಪಟ್ಟರು.

ಅಕ್ರಮ ವಲಸಿಗರ ಬಗ್ಗೆ ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿಡಬೇಕು ಹಾಗೂ ಅವರಿಗೆ ತೊಂದರೆ ಆಗಬಾರದು ಎಂಬ ಯತ್ನಾಳ್ ಅವರ ಮನವಿಗೆ ಪ್ರತಿಕ್ರಿಯಿಸಿದ ಸಚಿವರು, ಅಕ್ರಮ ವಲಸಿಗರನ್ನಷ್ಟೇ ಅಲ್ಲ, ಅವರನ್ನು ದೇಶದೊಳಗೆ ಕರೆತರುವ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸುವ ದಲ್ಲಾಳಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಾಹಿತಿ ನೀಡುವವರನ್ನು ಸರ್ಕಾರ ರಕ್ಷಿಸುತ್ತದೆ, ಆದರೆ ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದು ಸ್ಪಷ್ಟಪಡಿಸಿದರು.

  • ತನು -ಮನ ತಂಪಾಗಿಸೋ ತಂಪು ಬೀಜಗಳು
    by Team Varthaman
  • ಕಿರುಕುಳ ಆರೋಪ: ಕಚೇರಿಯಲ್ಲೇ ಅಧಿಕಾರಿ ಆತ್ಮಹತ್ಯೆ
    by Team Varthaman
  • ಇರಾನ್ ಜೊತೆ ಕದನ ವಿರಾಮ ಇಲ್ಲ: ಟ್ರಂಪ್ ಹೇಳಿಕೆ
    by Team Varthaman
  • ಪ್ರೀಮಿಯಂ ಪೆಟ್ರೋಲ್ ದರ ಏರಿಕೆ
    by Team Varthaman
  • RCB ಟಿಕೆಟ್ ಇದ್ದರೆ ಮೆಟ್ರೋ ಪ್ರಯಾಣ ಉಚಿತ
    by Team Varthaman
ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ
ಗೃಹಲಕ್ಷ್ಮೀ ಯೋಜನೆ : ಜನವರಿಯಿಂದ ಬಾಕಿಯಿರುವ ಮೂರು ತಿಂಗಳ ಹಣವನ್ನು ಮೇನಲ್ಲಿ ಬಿಡುಗಡೆ
ವಿಶ್ವ ಸಂಗೀತ ದಿನದ ಶುಭಾಶಯಗಳು
ಬೆಂ–ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು ತಡೆಗೋಡೆಗೆ ಡಿಕ್ಕಿ: ನಾಲ್ವರ ದುರ್ಮರಣ
ರಾಜ್ಯದ ಖಜಾನೆ ದೋಚಿ ಕಾಂಗ್ರೆಸ್ ಹೈಕಮಾಂಡ್ ತೃಪ್ತಿಪಡಿಸುತ್ತಿದೆ: ವಿಜಯೇಂದ್ರ
TAGGED:illegal immigrantsKarnataka Govtlatestnewsspecial teamಅಕ್ರಮ ವಲಸಿಗ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
BellaryKarnatakaLatest News

ಗಣಿ ಉದ್ಯಮಿಗಳಿಗೆ ED ಶಾಕ್

Team Varthaman
Team Varthaman
August 13, 2025
ನೇಪಾಳದಲ್ಲಿ ಏ.22 ರಂದು ಮಾಳವಿ ಮಂಜುನಾಥ್ ಅವರಿಂದ ಪಿಟೀಲು ವಾದನ
ಮುಡಾ ಹಗರಣ: ಇಡಿಯಿಂದ 440 ಕೋಟಿ ರೂ. ಆಸ್ತಿ ಮುಟ್ಟುಗೋಲು
Asia Cup 2025 :ನಾಳೆಯಿಂದ ಏಷ್ಯಾ ಕಪ್‌ 2025 ಪ್ರಾರಂಭ
ಬೆಂಗಳೂರಿನಲ್ಲಿ ಗೃಹಿಣಿಯ ಅನುಮಾನಾಸ್ಪದ ಸಾವು
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?