ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ದಾಖಲಿಸುವ ಅವಧಿಯನ್ನು ಫೆಬ್ರವರಿ 10ರಂದು ಬೆಳಗ್ಗೆ 8 ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.
ಸೀಟು ಹಂಚಿಕೆಗೊಂಡ ಅಭ್ಯರ್ಥಿಗಳು ಫೆಬ್ರವರಿ 12 ಮತ್ತು 13ರಂದು ಶುಲ್ಕ ಪಾವತಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಫೆಬ್ರವರಿ 14ರೊಳಗೆ ಸಂಬಂಧಿಸಿದ ಕಾಲೇಜುಗಳಿಗೆ ವರದಿ ಮಾಡಿಕೊಳ್ಳುವುದು ಕಡ್ಡಾಯ ಎಂದು ಹೇಳಿದರು.
ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಫೆಬ್ರವರಿ 10ರಂದು ಸಂಜೆ 5 ಗಂಟೆಗೆ ಪ್ರಕಟಿಸಲಾಗುವುದು. ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಫೆಬ್ರವರಿ 11ರಂದು ಮಧ್ಯಾಹ್ನ 1 ಗಂಟೆಯ ನಂತರ ಪ್ರಕಟಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ನಿಯಮಿತವಾಗಿ ಕೆಇಎ ವೆಬ್‌ಸೈಟ್ ಪರಿಶೀಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.








