ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಭಕ್ತರ ಮೇಲೆ ಚಿರತೆ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯಲ್ಲಿ ಚನ್ನಪಟ್ಟಣ ತಾಲೂಕಿನ ಬುವವಳ್ಳಿಯ ಶ್ರೇಯಸ್ ಎಂಬ ಬಾಲಕನ ಮೇಲೆ ಚಿರತೆ ದಾಳಿ ಮಾಡಿರುವ ಆರೋಪ ಕೇಳಿಬಂದಿದೆ.
ಮಲೆ ಮಹದೇಶ್ವರ ಬೆಟ್ಟದ ಪೊನ್ನಾಚಿ ಕ್ರಾಸ್ ಬಳಿ ಏಕಾಏಕಿ ಬಾಲಕ ಶ್ರೇಯಸ್ ಮೇಲೆ ಚಿರತೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ದಾಳಿಯಿಂದ ಬಾಲಕನ ಕಿವಿಗೆ ತರಚಿತ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ .
ಘಟನೆಯ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗಳು ಡ್ರೋನ್ ಬಳಸಿ ಸುತ್ತಮುತ್ತಲ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಿದ್ದು, ಆದರೆ ದಾಳಿ ನಡೆಸಿದ ಚಿರತೆ ಪತ್ತೆಯಾಗಿಲ್ಲ ಎಂದು ಡಿಸಿಎಫ್ ಭಾಸ್ಕರ್ ತಿಳಿಸಿದ್ದಾರೆ.ಇದನ್ನು ಓದಿ –ಶರಣ ಲೋಕದ ಧ್ರುವತಾರೆ…ಸಮಗಾರ ಹರಳಯ್ಯ
ಚಿರತೆ ದಾಳಿ ಶಂಕೆಯ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಭಕ್ತರಲ್ಲಿ ಆತಂಕ ಉಂಟಾಗಿದ್ದು, ಅರಣ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಭಕ್ತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ.








