ತುಮಕೂರು: ಮಾರ್ಚ್ 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಸಂಪುಟ ಸಭೆ ಕರೆದಿದ್ದು, ಅದರ ಬಳಿಕ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸಭೆಯಲ್ಲಿ ತೀರ್ಮಾನವಾದ ಬಳಿಕ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ. ನಂತರ ಸುಮಾರು 50 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಪೊಲೀಸ್ ಇಲಾಖೆಯಲ್ಲಿ ಸುಮಾರು 8 ಸಾವಿರ ಹುದ್ದೆಗಳು ಖಾಲಿ ಇದ್ದು, ಸರ್ಕಾರದ ನಿರ್ಧಾರದ ಬಳಿಕ ನೇಮಕಾತಿ ನಡೆಯಲಿದೆ ಎಂದು ಹೇಳಿದರು.
ಇದೇ ವೇಳೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಬಗ್ಗೆ ಮಾತನಾಡಿದ ಅವರು, ಹೋಟೆಲ್‌ಗಳಿಗೆ ಒಂದೆರಡು ದಿನ ತೊಂದರೆ ಆಗಬಹುದು. ಆದರೆ ಗೃಹಬಳಕೆಯ ಸಿಲಿಂಡರ್ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.ಇದನ್ನು ಓದಿ –ಹಾಲು ಉತ್ಪಾದನೆ, ಮಾರಾಟಕ್ಕೆ ಲೈಸೆನ್ಸ್ ಕಡ್ಡಾಯ: FSSAI ಆದೇಶ
ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.








