- ಓರ್ವನ ರಕ್ಷಣೆ
ಮಂಡ್ಯ: ಬಿಸಿಲಿನ ತೀವ್ರತೆಯಿಂದಾಗಿ ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ.
ಮಳವಳ್ಳಿ ಪಟ್ಟಣದ ದೊಡ್ಡಕೆರೆಗೆ ಈಜಲು ತೆರಳಿದ್ದ ವಿದ್ಯಾರ್ಥಿಗಳಲ್ಲಿ ಕೇಶವ (11) ಮೃತಪಟ್ಟಿದ್ದಾನೆ. ಇನ್ನೊಬ್ಬ ವಿದ್ಯಾರ್ಥಿ ಹೇಮಂತ್ (12) ಅವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೇಶವ ಮತ್ತು ಹೇಮಂತ್ ಇಬ್ಬರೂ ಮಳವಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಪರೀಕ್ಷೆ ಮುಗಿದಿದ್ದರಿಂದ ರಜೆ ಹಿನ್ನೆಲೆಯಲ್ಲಿ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ.ಇದನ್ನು ಓದಿ –ಯುದ್ಧದ ಪರಿಣಾಮ: ಅಡುಗೆ ಎಣ್ಣೆ ಬೆಲೆ ಲೀಟರ್ಗೆ 8–10 ರೂ. ಏರಿಕೆ
ಘಟನೆ ಮಳವಳ್ಳಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.








