ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪರೀಕ್ಷೆಗಳ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ.
ತಾಂತ್ರಿಕ ಶಿಕ್ಷಣ ಇಲಾಖೆ, ಸಣ್ಣ ಕೈಗಾರಿಕೆ ಅಭಿವೃದ್ಧಿ ಇಲಾಖೆ, ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಜಲಮಂಡಳಿ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಹಲವು ಇಲಾಖೆಗಳ ಹುದ್ದೆಗಳಿಗಾಗಿ ಫೆಬ್ರವರಿ 21 ಮತ್ತು 22ರಂದು ಪರೀಕ್ಷೆಗಳು ನಡೆದಿದ್ದವು.
ಈ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಸಂಬಂಧಿಸಿದ ಇಲಾಖೆಗಳಿಗೂ ಹಸ್ತಾಂತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.ಇದನ್ನು ಓದಿ –ಆಸ್ತಿ ಕಲಹ: ಸಂಬಂಧಿ ಜೊತೆ ಸೇರಿ ಅಣ್ಣನ ಕೊಲೆ
ಇದೀಗ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಗಳು ನಿಯಮಾನುಸಾರ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಪ್ರಕ್ರಿಯೆ ಕೈಗೊಳ್ಳಲಿವೆ ಎಂದು KEA ಮಾಹಿತಿ ನೀಡಿದೆ.








