ಬೆಂಗಳೂರು : ರಾಜ್ಯದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಹಲವು ಹೋಟೆಲ್‌ಗಳು ಬಂದ್ ಆಗಿದ್ದು, ಇನ್ನೂ ಕೆಲವು ಮೆನು ಕಡಿತದೊಂದಿಗೆ ಸೇವೆ ನೀಡುತ್ತಿವೆ. ಇದೇ ಪರಿಸ್ಥಿತಿ ಮುಂದುವರಿದರೆ ಇನ್ನಷ್ಟು ಹೋಟೆಲ್‌ಗಳು ಮುಚ್ಚುವ ಆತಂಕ ಎದುರಾಗಿದೆ.
ಈ ಹಿನ್ನೆಲೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ. ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಪೂರೈಸುವಂತೆ ಸರ್ಕಾರದ ಸ್ವಾಮ್ಯದ ತೈಲ ಕಂಪನಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.
ಅಸೋಸಿಯೇಷನ್ ಪರ ವಕೀಲ ಕೆ. ಸತೀಶ್ ಭಟ್ ಅರ್ಜಿ ಸಲ್ಲಿಸಿದ್ದು, ಹೋಟೆಲ್‌ಗಳ ಮುಚ್ಚುವಿಕೆಯಿಂದ ಹಾಲು ಮತ್ತು ತರಕಾರಿ ಮಾರಾಟಗಾರರಿಗೂ ತೊಂದರೆ ಉಂಟಾಗಿದೆ ಎಂದು ತಿಳಿಸಿದ್ದಾರೆ. ಸುಮಾರು 40 ಸಾವಿರ ಹೋಟೆಲ್‌ಗಳು ಮತ್ತು 6 ಲಕ್ಷ ಕಾರ್ಮಿಕರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಚಿವ ಕೆ.ಹೆಚ್. ಮುನಿಯಪ್ಪ ಅವರು ಹೋಟೆಲ್ ಉದ್ಯಮಕ್ಕೆ 1,000 ಸಿಲಿಂಡರ್ ಪೂರೈಸುವುದಾಗಿ ಹೇಳಿದ್ದರೂ, ಈ ಭರವಸೆ ಬಗ್ಗೆ ಹೋಟೆಲ್ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 40 ಸಾವಿರ ಹೋಟೆಲ್‌ಗಳಿಗೆ ಕೇವಲ 1,000 ಸಿಲಿಂಡರ್ ನೀಡುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಹೇಳಿದ್ದಾರೆ.ಇದನ್ನು ಓದಿ –ಗೋಕುಲ್ ಚಿತ್ರಮಂದಿರದಲ್ಲಿ ಅಗ್ನಿ ಅವಘಡ: ಓರ್ವ ಸಜೀವದಹನ
ಬೆಂಗಳೂರು ನಗರದಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೋಟೆಲ್‌ಗಳಿದ್ದು, ಅದರಲ್ಲಿ 4,500 ಹೋಟೆಲ್‌ಗಳು ನೋಂದಾಯಿತವಾಗಿವೆ. ಇವುಗಳೆಲ್ಲವೂ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯಿಂದ ನಷ್ಟ ಅನುಭವಿಸುತ್ತಿವೆ. ಹಲವೆಡೆ ಹೋಟೆಲ್‌ಗಳು ಬಂದ್ ಆಗಿದ್ದು, ಇನ್ನೂ ಕೆಲವು ನಷ್ಟದಲ್ಲಿಯೇ ಕಾರ್ಯನಿರ್ವಹಿಸುತ್ತಿವೆ. ಇದರ ಪರಿಣಾಮವಾಗಿ ನಗರದಲ್ಲೇ ನೂರಾರು ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.








