ರಾಮನಗರ: ಬೆಂಗಳೂರು–ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಮೃತರನ್ನು ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್ (45), ಸಕೀರ್ (27) ಎಂದು ಗುರುತಿಸಲಾಗಿದೆ.
ಕೇರಳದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.ಇದನ್ನು ಓದಿ –ಕೋರ್ಟ್ ಉದ್ಯೋಗದ ಹೆಸರಿನಲ್ಲಿ ₹25 ಕೋಟಿ ವಂಚನೆ
ಇನ್ನೂ, ಸೀಟ್ ಇಲ್ಲದಿದ್ದರೂ ಮುಂಭಾಗದ ಕ್ಯಾಬಿನ್‌ನಲ್ಲಿ ನಾಲ್ವರನ್ನು ಕುಳ್ಳಿರಿಸಿದ್ದರಿಂದ ಅಪಘಾತದ ವೇಳೆ ಹೆಚ್ಚಿನ ಹಾನಿಯಾಗಿದ್ದು, ಇದಕ್ಕೂ ಕಾರಣವಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.








