ಬೆಂಗಳೂರು: ಕೇಂದ್ರ ಸರ್ಕಾರ ತೈಲದ ಬೆಲೆಗಳನ್ನು ಏರಿಸುತ್ತಿರುವ ಕ್ರಮ ಜನರಿಗೆ ಭಾರೀ ಹೊರೆ ಆಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೈಲ ದರ ಏರಿಕೆ ಮೂಲಕ ಜನರನ್ನು ಸಂಕಷ್ಟಕ್ಕೆ ತಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಈ ವಿಷಯವನ್ನು ಪಕ್ಷದ ನಾಯಕರಾದ ಸುರ್ಜೇವಾಲಾ ಹಾಗೂ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಇನ್ನೂ ಐಪಿಎಲ್ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಶಾಸಕರ ಬೇಡಿಕೆ ಸಮಂಜಸವಾಗಿದೆ ಎಂದು ಹೇಳಿದರು. ಶಾಸಕರು ಕೂಡ ವ್ಯವಸ್ಥೆಯ ಭಾಗವಾಗಿರುವುದರಿಂದ ಅವರಿಗೆ ಟಿಕೆಟ್ ವ್ಯವಸ್ಥೆ ಮಾಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು. ಈ ಕುರಿತು ಕೆಎಸ್‌ಸಿಎ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.ಇದನ್ನು ಓದಿ –ಮುಡಾ ಹಗರಣ : ಸಿದ್ದರಾಮಯ್ಯ ದಂಪತಿಗೆ ಹೈಕೋರ್ಟ್ ನೋಟಿಸ್
ಟಿಕೆಟ್ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧವೂ ಡಿಕೆ ಶಿವಕುಮಾರ್ ಕಿಡಿ ಕಾರಿದರು. ತೇಜಸ್ವಿ ಸೂರ್ಯ ತಮ್ಮ ಅಭಿಪ್ರಾಯಗಳನ್ನು ತಮ್ಮ ಪಕ್ಷದೊಳಗೆ ಹೇಳಿಕೊಳ್ಳಲಿ, ನಮ್ಮ ವಿಚಾರದಲ್ಲಿ ಹಸ್ತಕ್ಷೇಪ ಬೇಡ ಎಂದು ತೀವ್ರವಾಗಿ ಪ್ರತಿಕ್ರಿಯಿಸಿದರು.








