ಬೆಂಗಳೂರು, ಏಪ್ರಿಲ್ 06: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಯೆಲ್ಲೋ ಅಲರ್ಟ್ ಘೋಷಿಸಲಾದ ಜಿಲ್ಲೆಗಳು: ಕಲಬುರ್ಗಿ, ಧಾರವಾಡ, ಗದಗ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇದಲ್ಲದೆ, ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳೊಂದಿಗೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ರಾಯಚೂರು ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30–40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಪ್ರದೇಶಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.








