ಚಿತ್ರದುರ್ಗ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಮಾಜಿ ಅಕೌಂಟೆಂಟ್ ಸುಶೀಲಮ್ಮ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರು ಸುಮಾರು ಒಂದು ವರ್ಷ ಹಿಂದೆ ವಿಆರ್‌ಎಸ್ ಪಡೆದಿದ್ದರು. ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸಿದ್ದ ವೇಳೆ ಆದಾಯ ಮೀರಿ ಆಸ್ತಿ ಸಂಪಾದನೆ ಹಾಗೂ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗದ ಮೆದೇಹಳ್ಳಿ ಬಡಾವಣೆಯಲ್ಲಿರುವ ಮನೆ ಹಾಗೂ ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.ಇದನ್ನು ಓದಿ – ಇನ್ನೂ ಎರಡು ವರ್ಷ ಸಿದ್ದು ಸಿಎಂ; ಹೈಕಮಾಂಡ್ ಸ್ಪಷ್ಟನೆ ಬೇಡ: ಪರಮೇಶ್ವರ್
ಲೋಕಾಯುಕ್ತ ಎಸ್‌ಪಿ ವಾಸುದೇವರಾಮ್ ಹಾಗೂ ಡಿವೈಎಸ್‌ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಯುತ್ತಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.








