ರಾಯಚೂರು: ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಈ-ಖಾತೆ ಪ್ರಕ್ರಿಯೆ ಪೂರ್ಣಗೊಳಿಸಲು ಅವರು ರಾಘವೇಂದ್ರ ರೆಡ್ಡಿ ಎಂಬ ವ್ಯಕ್ತಿಯಿಂದ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರ ಮೊದಲ ಕಂತಾಗಿ 1 ಲಕ್ಷ ರೂ. ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.
ಅಧಿಕಾರಿಗಳು ಬರುತ್ತಿರುವುದನ್ನು ಗಮನಿಸಿದ ಸುರೇಶ್ ಶೆಟ್ಟಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿ, ಸಿರವಾರದಿಂದ ಕವಿತಾಳದ ಕಡೆಗೆ ಓಡಿಹೋಗಲು ಪ್ರಯತ್ನಿಸಿದ್ದಾನೆ.
ಕಾರಿನಲ್ಲಿ ಹಿಂಬಾಲಿಸಿದ ಲೋಕಾಯುಕ್ತ ತಂಡ ಕೊನೆಗೂ ಅಧಿಕಾರಿಯನ್ನು ಹಿಡಿದು ಬಂಧಿಸಿದೆ. ಸದ್ಯ ಕವಿತಾಳ ಪ್ರವಾಸಿ ಮಂದಿರದಲ್ಲಿ ಅಧಿಕಾರಿಯ ವಿಚಾರಣೆ ಮತ್ತು ಪಂಚನಾಮೆ ನಡೆಯುತ್ತಿದೆ.ಇದನ್ನು ಓದಿ –ದ್ವಿತೀಯ PUC ಫಲಿತಾಂಶ ಪ್ರಕಟ
ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಪುರುಷೋತ್ತಮ್ ಸೇರಿದಂತೆ ಸಿಬ್ಬಂದಿ ವಿಜಯಕುಮಾರ್ ಹಾಗೂ ಅಮರೇಶ್ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.








