- ₹14 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆ
ಬೆಳಗಾವಿ: ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇಇ) ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.
ಲೋಕಾಯುಕ್ತ ದಾಳಿಯಲ್ಲಿ ಒಟ್ಟು ₹14 ಕೋಟಿಗೂ ಅಧಿಕ ಅಕ್ರಮ ಆಸ್ತಿ ಪತ್ತೆಯಾಗಿದ್ದು, ಅಧಿಕಾರಿಗಳೇ ಅಚ್ಚರಿಗೊಂಡಿದ್ದಾರೆ. ಬೆಳಗಾವಿ ನಗರದ ಆಂಜನೇಯ ನಗರ ಸೇರಿದಂತೆ ಏಳು ಕಡೆಗಳಲ್ಲಿ ಒಂದೇ ಸಮಯದಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿತು.ಇದನ್ನು ಓದಿ –ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ದಾಳಿಯ ವೇಳೆ ಹಲವಾರು ಆಸ್ತಿ ದಾಖಲೆಗಳು ಹಾಗೂ ಮೌಲ್ಯಯುತ ವಸ್ತುಗಳು ಪತ್ತೆಯಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.








