ಬಾಗಲಕೋಟೆ: ಲಂಚ ಕೇಳಿದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕೆರೂರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದಾರೆ.
ಶಂಕ್ರಪ್ಪ ಬೂದಿಹಾಳ ಎಂಬುವರನ್ನು ಠಾಣೆಗೆ ಕರೆಸಿಕೊಂಡಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಭೀಮಪ್ಪ ರಬಕವಿ, ₹1.70 ಲಕ್ಷ ಲಂಚ ನೀಡದಿದ್ದರೆ ಇಸ್ಪೀಟ್ ಆಡಿಸುತ್ತಿದ್ದರೆಂದು ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ, ₹1.70 ಲಕ್ಷ ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿದ್ದಾರೆ. ಈ ವೇಳೆ ಇನ್‌ಸ್ಪೆಕ್ಟರ್ ಭೀಮಪ್ಪ ರಬಕವಿ ಹಾಗೂ ಕಾನ್‌ಸ್ಟೆಬಲ್ ಸಂತೋಷ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.








