ಚಾಮರಾಜನಗರ: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ ಮೂರು ದಿನಗಳ ಚಿಕಿತ್ಸೆ ಬಳಿಕ ಸಾವನ್ನಪ್ಪಿದ ಮನಕಲುಕುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಉಡುತೊರೆಹಳ್ಳ ಜಲಾಶಯದ ಬಳಿ ನಡೆದಿದೆ.
ಬೇಸಿಗೆ ಬಿಸಿಲಿನ ತಾಪದಿಂದ ಬಳಲುತ್ತಿದ್ದ ಕಾಡಾನೆ ಜಲಾಶಯಕ್ಕೆ ನೀರು ಕುಡಿಯಲು ಬಂದ ವೇಳೆ ಕೆಸರಿನಲ್ಲಿ ಸಿಲುಕಿಕೊಂಡಿತ್ತು. ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಆನೆಯನ್ನು ರಕ್ಷಿಸಿ ಹೊರತೆಗೆದಿದ್ದರು.
ರಕ್ಷಣೆ ಬಳಿಕ ನಿತ್ರಾಣಗೊಂಡ ಸ್ಥಿತಿಯಲ್ಲಿದ್ದ ಆನೆಗೆ ಕಳೆದ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಾಡಾನೆ ಸಾವನ್ನಪ್ಪಿದೆ.ಇದನ್ನು ಓದಿ –ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಮತದಾನ
ಬೇಸಿಗೆ ಹಿನ್ನೆಲೆ ಅರಣ್ಯ ಪ್ರದೇಶಗಳಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ ಈ ಘಟನೆ ದುಃಖ ತಂದಿದೆ.








