ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಹಾಗೂ ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಪಿಜಿಸಿಇಟಿ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಈ ಕುರಿತು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದು, ಅಭ್ಯರ್ಥಿಗಳ ಮನವಿಯ ಮೇರೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಅರ್ಜಿ ಶುಲ್ಕ ಪಾವತಿಸಲು ಮೇ 5 ಕೊನೆಯ ದಿನವಾಗಿರುತ್ತದೆ.ಇದನ್ನು ಓದಿ –8 ಜಿಲ್ಲೆಗಳ ಜಿ.ಪಂ ಕ್ಷೇತ್ರ ಮರು ವಿಂಗಡಣೆ
ಮತ್ತೆ ಅವಧಿ ವಿಸ್ತರಣೆ ಇರುವುದಿಲ್ಲವಾದ್ದರಿಂದ, ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.








