ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಡಾ. ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದ್ದು, ಕುಟುಂಬದಲ್ಲಿ ಸಂತಸದ ವಾತಾವರಣ ಮೂಡಿದೆ. ಈ ಸಂತೋಷದ ಸುದ್ದಿಯನ್ನು ಡಾಲಿ ಧನಂಜಯ್ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಈ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಪ್ರಕಟಿಸಿದ್ದರು. ಬೇಬಿ ಬಂಪ್ ಫೋಟೋಶೂಟ್ ನಡೆಸಿ, “Our universe is expanding” ಎಂದು ಇನ್‌ಸ್ಟಾಗ್ರಾಂನಲ್ಲಿ ಬರೆದು ಸಂತೋಷ ವ್ಯಕ್ತಪಡಿಸಿದ್ದರು.ಇದನ್ನು ಓದಿ –ವಿಮಾನ ಪತನ: ಐವರು ದುರ್ಮರಣ
2025ರ ಫೆಬ್ರವರಿ 16ರಂದು ಡಾಲಿ ಧನಂಜಯ್ ಅವರು ಡಾ. ಧನ್ಯತಾ ಜೊತೆ ಮೈಸೂರುನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆ ಹಾಗೂ ಆರತಕ್ಷತಾ ಸಮಾರಂಭಗಳಿಗೆ ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಅನೇಕ ಗಣ್ಯರು ಭಾಗಿಯಾಗಿ ಶುಭಾಶಯ ಕೋರಿದ್ದರು.








