ಮೈಸೂರು: ಮುಂದಿನ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಎಂಎಲ್‌ಸಿ ಎಚ್. ವಿಶ್ವನಾಥ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿ ಜನರೇ ಹಣ ನೀಡಿ ಆಶೀರ್ವಾದ ಮಾಡುತ್ತಿದ್ದರು. ಆದರೆ ಈಗ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳೇ ಭಾರಿ ಹಣ ಖರ್ಚು ಮಾಡುವ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.
ಈಗಿನ ಪರಿಸ್ಥಿತಿಯಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸುಮಾರು 50 ಕೋಟಿ ರೂ. ವೆಚ್ಚವಾಗುತ್ತದೆ. ರಿಯಲ್ ಎಸ್ಟೇಟ್ ವ್ಯವಹಾರ ಮಾಡುವವರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಚುನಾವಣೆಗೆ ಬರುತ್ತಾರೆ. ಆದರೆ ನನಗೆ ಒಂದು ಮನೆ ಮತ್ತು ಒಂದು ನಿವೇಶನ ಮಾತ್ರ ಇದೆ. ಇಷ್ಟು ದೊಡ್ಡ ಮೊತ್ತ ಖರ್ಚು ಮಾಡುವ ಸಾಮರ್ಥ್ಯ ನನ್ನಲ್ಲಿಲ್ಲ ಎಂದು ತಿಳಿಸಿದ್ದಾರೆ.ಇದನ್ನು ಓದಿ –ಮೂವರು IPS ಅಧಿಕಾರಿಗಳ ವರ್ಗಾವಣೆ
ತಮ್ಮ ಮಕ್ಕಳು ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ತಮ್ಮ ಶಕ್ತಿಗೆ ಅನುಗುಣವಾಗಿ ರಾಜಕೀಯದಲ್ಲಿ ಮುಂದುವರಿಯಲಿದ್ದಾರೆ. ತಾವೂ ರಾಜಕೀಯದಲ್ಲಿ ಸಕ್ರಿಯರಾಗಿಯೇ ಇರುತ್ತೇನೆ, ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.








