ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 6 ಮತ್ತು 7ರಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮೇ 7ರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ ಸುಮಾರು 51.5 ಮಿ.ಮೀ. ಮಳೆಯಾಗುವ ನಿರೀಕ್ಷೆಯಿದೆ.ಇದನ್ನು ಓದಿ –ಚುನಾವಣಾ ರಾಜಕೀಯಕ್ಕೆ ಗುಡ್ ಬೈ: ಎಚ್. ವಿಶ್ವನಾಥ್ ಘೋಷಣೆ
ಇದೇ ವೇಳೆ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ವೇಳೆಗೆ ಕೆಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.








