By using this site, you agree to the Privacy Policy and Terms of Use.
Accept
VarthamanVarthamanVarthaman
Notification Show More
Font ResizerAa
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
    ArticlesShow More
    ಉಡುಗೊರೆ ಹೊರೆಯಾಗದಿರಲಿ
    May 16, 2026
    ಅಸಹಾಯಕತೆಗೆ ಸ್ಪಂದಿಸುವ ಕನ್ನಡಿಗರ ಸೌಜನ್ಯಕ್ಕೆ ಸಾಟಿಯುಂಟೇ……?
    May 16, 2026
    ” ರಿಜೆಕ್ಷನ್ ಟು ರೆವಲ್ಯೂಷನ್ “
    May 5, 2026
    “ಸೂರ್ಯನಿಗೆ ಸವಾಲೆಸೆದವರು”
    May 3, 2026
    ಸ್ವಭಾವದ ಸ್ವರೂಪ
    May 3, 2026
  • Sports
  • National
  • International
  • Crime
Reading: TCS ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಬಂಧನ
Share
Font ResizerAa
VarthamanVarthaman
  • Home
  • Karnataka
  • Articles
  • Sports
  • National
  • International
  • Crime
Search
  • Home
  • Karnataka
    • Bengaluru
    • Mandya
    • Mysore
    • Chikkamagaluru
  • Articles
  • Sports
  • National
  • International
  • Crime
Follow US
Varthaman > Karnataka – Latest Breaking News > Crime > TCS ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಬಂಧನ
Crime

TCS ಮತಾಂತರ ಪ್ರಕರಣ: ಪ್ರಮುಖ ಆರೋಪಿ ನಿದಾ ಖಾನ್ ಬಂಧನ

Team Varthaman
Last updated: May 8, 2026 10:12 AM
Team Varthaman
Published: May 8, 2026
Share
SHARE

ಮುಂಬೈ: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸಂಸ್ಥೆಯ ಮಹಾರಾಷ್ಟ್ರದ ನಾಸಿಕ್ ಘಟಕದಲ್ಲಿ ನಡೆದಿದೆ ಎನ್ನಲಾದ ಮತಾಂತರ ಮತ್ತು ಕಿರುಕುಳ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್‌ರನ್ನು ಪೊಲೀಸರು ಬಂಧಿಸಿದ್ದಾರೆ.

ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆಕೆಯನ್ನು ಛತ್ರಪತಿ ಸಂಭಾಜಿನಗರದಲ್ಲಿ ಜಂಟಿ ಕಾರ್ಯಾಚರಣೆಯ ಮೂಲಕ ಪತ್ತೆ ಹಚ್ಚಿ ಬಂಧಿಸಲಾಗಿದೆ.

ಈ ಪ್ರಕರಣ ದೇಶಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಸಹೋದರನ ಪರವಾಗಿ ಮಹಿಳೆಯನ್ನು ಮತಾಂತರಕ್ಕೆ ಒತ್ತಾಯಿಸಿದ ಆರೋಪ ನಿದಾ ಖಾನ್ ಮೇಲೆ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಚ್‌ಆರ್ ಮುಖ್ಯಸ್ಥೆ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದರು.

Join WhatsApp Group

ನಾಸಿಕ್ ಎಸ್‌ಐಟಿ, ಛತ್ರಪತಿ ಸಂಭಾಜಿನಗರ ಪೊಲೀಸ್ ಕಮಿಷನರೇಟ್ ಹಾಗೂ ಅಪರಾಧ ವಿಭಾಗದ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ನಾರೇಗಾಂವ್ ಪ್ರದೇಶದ ಫ್ಲಾಟ್‌ನಲ್ಲಿ ತಂಗಿದ್ದ ನಿದಾ ಖಾನ್‌ರನ್ನು ಬಂಧಿಸಿದರು. ಕಳೆದ ನಾಲ್ಕು ದಿನಗಳಿಂದ ಆಕೆ ತನ್ನ ಕುಟುಂಬದವರೊಂದಿಗೆ ಅಲ್ಲೇ ತಂಗಿದ್ದಳು. ಬಂಧನದ ಬಳಿಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ನಾಸಿಕ್‌ಗೆ ಕರೆದೊಯ್ಯಲಾಗಿದೆ.

ತಾನು ಗರ್ಭಿಣಿ ಎಂದು ಹೇಳಿಕೊಂಡು ನಿರೀಕ್ಷಣಾ ಜಾಮೀನು ಕೋರಿದ್ದರೂ, ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ನ್ಯಾಯಾಲಯ ಅದನ್ನು ನಿರಾಕರಿಸಿತು.

ನಿದಾ ಖಾನ್ 2021ರ ಡಿಸೆಂಬರ್‌ನಲ್ಲಿ ಪ್ರೊಸೆಸ್ ಅಸೋಸಿಯೇಟ್ ಆಗಿ ಸಂಸ್ಥೆಗೆ ಸೇರಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಏಪ್ರಿಲ್ 9ರಂದು ಕಂಪನಿಯು ಆಕೆಯನ್ನು ಅಮಾನತುಗೊಳಿಸಿತು. ಆಕೆಯ ಆಂತರಿಕ ವ್ಯವಸ್ಥೆ ಹಾಗೂ ನೆಟ್‌ವರ್ಕ್ ಪ್ರವೇಶವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಈ ಪ್ರಕರಣವು ನಾಸಿಕ್ ಘಟಕದ ಮಹಿಳಾ ಉದ್ಯೋಗಿಯೊಬ್ಬರ ದೂರಿನಿಂದ ಬೆಳಕಿಗೆ ಬಂದಿತು. ಸಹೋದ್ಯೋಗಿ ದಾನಿಶ್ ಶೇಖ್ ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿದ್ದ ಎಂದು ಮಹಿಳೆ ಆರೋಪಿಸಿದ್ದರು. ನಂತರ ಆತ ಈಗಾಗಲೇ ವಿವಾಹಿತನಾಗಿದ್ದುದನ್ನು ಮುಚ್ಚಿಟ್ಟಿದ್ದಾನೆ ಎಂಬುದು ತಿಳಿದುಬಂದಿದೆ.

ಇದಲ್ಲದೆ, ನಿದಾ ಖಾನ್ ದೂರುದಾರ ಮಹಿಳೆಗೆ ಧರ್ಮದ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿ ಮತಾಂತರಕ್ಕೆ ಒತ್ತಡ ಹೇರಿದ್ದಾಳೆ ಎಂಬ ಆರೋಪವಿದೆ. ಪ್ರಕರಣ ಮುಂದುವರಿದಂತೆ ಇನ್ನೂ ಹಲವು ಮಹಿಳಾ ಉದ್ಯೋಗಿಗಳು ಮಾನಸಿಕ ಮತ್ತು ಲೈಂಗಿಕ ಕಿರುಕುಳದ ಆರೋಪಗಳನ್ನು ಮುಂದಿಟ್ಟಿದ್ದಾರೆ.ಇದನ್ನು ಓದಿ –ಹೆಣ್ಣು ಮಗುವಿಗೆ ಜನ್ಮ ನೀಡಿದ ಸೂರ್ಯಕುಮಾರ್ ಯಾದವ್ ದಂಪತಿ

ಈ ನಡುವೆ ಸಂಸ್ಥೆಯು ಸ್ಪಷ್ಟನೆ ನೀಡಿ, ನಿದಾ ಖಾನ್ ಎಚ್‌ಆರ್ ಮ್ಯಾನೇಜರ್ ಆಗಿರಲಿಲ್ಲ ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಆಕೆಯ ಯಾವುದೇ ಪಾತ್ರವಿರಲಿಲ್ಲ ಎಂದು ತಿಳಿಸಿದೆ. ಜೊತೆಗೆ ಈ ಕುರಿತು ಸಂಸ್ಥೆಯ ಆಂತರಿಕ ವಿಭಾಗಕ್ಕೆ ಯಾವುದೇ ಅಧಿಕೃತ ದೂರು ಬಂದಿರಲಿಲ್ಲ ಎಂದೂ ಹೇಳಿದೆ.

  • ವೋಟರ್ ಲಿಸ್ಟ್ ಪರಿಷ್ಕರಣೆ : ಹೆಸರು ಅಳಿದರೆ ಗ್ಯಾರಂಟಿ ಗೆ ಕತ್ತರಿ?
    by Team Varthaman
  • ಭಾರಿ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ
    by Team Varthaman
  • ರಾಮ ಮಂದಿರ ಪ್ರಕರಣ: ವಕಾಲತ್ತು ವಹಿಸದಿರಲು ನಿರ್ಧಾರ
    by Team Varthaman
  • ರಾಜ್ಯದಲ್ಲಿ ಮತ್ತೆ ಬಸ್‌ ಟಿಕೆಟ್ ದರ ಏರಿಕೆ ಸಾಧ್ಯತೆ
    by Team Varthaman
  • ಪಾಸ್‌ಪೋರ್ಟ್ ಶುಲ್ಕ ಏರಿಕೆ: ಹೊಸ ದರಗಳು ತಕ್ಷಣದಿಂದಲೇ ಜಾರಿ
    by Team Varthaman
ಮಂತ್ರಾಲಯ ಬಸ್ ಅಪಘಾತ: ಓರ್ವ ಸಾವು, 11 ಮಂದಿಗೆ ಗಾಯ
ಮಂಡ್ಯ: ವೈದ್ಯಕೀಯ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು
ಬೆಂಗಳೂರು ವಿಮಾನ ನಿಲ್ದಾಣ- 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ
ಲೈಂಗಿಕ ಕಿರುಕುಳದ ಆರೋಪ: ವಿದ್ಯಾರ್ಥಿನಿ ಆತ್ಮಹತ್ಯೆ
10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮಹಾನಗರ ಪಾಲಿಕೆ ಅಧಿಕಾರಿ
TAGGED:Nida KhanTata GroupTCS conversion caseನಿದಾ ಖಾನ್ಮತಾಂತರ ಪ್ರಕರಣ
Share This Article
Facebook Email Print
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
EducationKarnatakaMysoreTrending

ಮೈಸೂರು ಜಿಲ್ಲೆಯಲ್ಲಿ 20 ಪರೀಕ್ಷಾ ಕೇಂದ್ರಗಳಲ್ಲಿ ‘ನೀಟ್‌’ ಪರೀಕ್ಷೆ

Team Varthaman
Team Varthaman
April 29, 2025
ಬಿಟ್‌ಕಾಯಿನ್ ಹಗರಣ: ಶ್ರೀಕಿ ಬಂಧನ; ನಲಪಾಡ್‌ಗೆ ಸಂಕಷ್ಟ ಭೀತಿ
ಬಂದದ್ದೆಲ್ಲ ಬರಲಿ…. ಭಗವಂತನ ದಯೆ ಒಂದಿರಲಿ
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಪ್ರಮಾಣವಚನ ಸ್ವೀಕಾರ
ಕದನ ವಿರಾಮದ ಬಳಿಕವೂ ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Articles
  • Sports
  • Latest News
  • Karnataka News

About US

Since its inception in 1957, Varthamana has stood tall as one of the most trusted and respected Kannada daily newspapers. With deep roots in the rich cultural landscape of Karnataka, Varthamana continues to be the voice of the people, championing truth, transparency, and the values that define the region. Established with a strong commitment to ethical journalism, our newspaper has consistently provided comprehensive coverage, authentic news, and insightful editorials for over six decades. Today, under the dynamic leadership of Editor K. N. Ravi, Varthamana shines even brighter, blending a proud heritage with a modern outlook to meet the evolving needs of readers across the state. Our presence in the digital space, through Varthamana Digital, ensures that our trusted news and regional stories reach a wider audience faster and with greater impact.

Contact Us

© Varthaman. All Rights Reserved.
Welcome Back!

Sign in to your account

Username or Email Address
Password

Lost your password?